ಚಂದ್ರವಳ್ಳಿ ನ್ಯೂಸ್, ಆನೇಕಲ್:
ಆನೇಕಲ್ ತಾಲ್ಲೂಕು ವ್ಯಾಪ್ತಿಯ ಶಾಲಾ/ಕಾಲೇಜುಗಳಲ್ಲಿ 9-10 ನೇ ತರಗತಿಗಳಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆದು ವ್ಯಾಸಾಂಗ ಮಾಡುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು
2025-26ನೇ ಸಾಲಿನ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅಭಿವೃದ್ಧಿ ಪಡಿಸಿರುವ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್
ವೆಬ್‍ಸೈಟ್: https://scholaarships.gov.in ಮೂಲಕ One Time Registration ಸಂಖ್ಯೆಯನ್ನು ಸೃಜಿಸಿ, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಆನೇಕಲ್ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.