ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿಗೆ ವಿದ್ಯಾರ್ಥಿವೇತನ ಮೆಟ್ರಿಕ್ ನಂತರ ಮತ್ತು ಮೆರಿಟ್–ಕಂ–ಮೀನ್ಸ್ “ಶುಲ್ಕ ಮರುಪಾವತಿ”ಗೆ ಪಿಯುಸಿ, ಡಿಪ್ಲೋಮ, ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‍ಗಳು, ಪದವಿ ಮತ್ತು ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆದಿರುವ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ https://ssp.karnataka.gov.in ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.