ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್,

- Advertisement - 

ಮಲ್ಟಿ ಕ್ಯೂಸಿನ್ ಕುಕ್ ಮತ್ತು ರೂಂ ಅಟೆಂಡೆಟ್, ಫ್ರಂಟ್ ಆಫೀಸ್ ಅಸೋಸಿಯೆಟ್‍ಗೆ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. ಜೂನ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು,

- Advertisement - 

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ  ಅಭ್ಯಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್‍ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಅವರ ಮೂಲಕ ವಸತಿ ಸಹಿತ ತರಬೇತಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಹಾಗೂ ಸ್ವಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಇವೆ.

ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ತರಬೇತಿಗೆ 10 ನೇ ತರಗತಿ ಉತ್ತೀರ್ಣರಾಗಿರಬೇಕು.  ರೂಂ ಅಟೆಂಡೆಂಟ್ ತರಬೇತಿಗೆ 5ನೇ ತರಗತಿ ಉತ್ತೀರ್ಣರಾಗಿರಬೇಕು., ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.  ಈ ವಿಭಾಗಗಳಿಗೆ ನಾಲ್ಕು ತಿಂಗಳ ತರಬೇತಿ ಹಾಗೂ ಮಲ್ಟಿ ಕ್ಯೂಸಿನ್ ಕುಕ್ ತರಬೇತಿಗೆ 8ನೇ ತರಗತಿ ಉತ್ತೀರ್ಣರಾಗಿರಬೇಖು. ಈ ವಿಭಾಗದಲ್ಲಿ 5 ತಿಂಗಳ ತರಬೇತಿ  ನೀಡಲಾಗುವುದು. ತರಬೇತಿ ಪಡೆಯಲು ಇಚ್ಚಿಸುವ 20 ವರ್ಷದಿಂದ 45 ವರ್ಷ ವಯೋಮಿತಿಯ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

- Advertisement - 

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಡಗಡದ ಅಭ್ಯರ್ಥಿಗಳು ಇದೇ ಮೇ31 ರಿಂದ ಚಿತ್ರದುರ್ಗ ನಗರದ ಕೋಟೆ ಮುಂಭಾಗದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಜೂನ್ 10ರ ಸಂಜೆ 4.30ರೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

Share This Article
error: Content is protected !!
";