ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಕಾನೂನಿಗಿಂತಲೂ ದೊಡ್ಡ ವ್ಯಕ್ತಿಯೇ ಕರ್ನಾಟಕ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ನಾಸೀರ್‌ಹುಸೇನ್? ಎಂದು ಜೆಡಿಎಸ್ ಪ್ರಶ್ನಿಸಿದೆ.
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಜೊತೆಯಲ್ಲಿ ತಿರುಗಾಡುವ ರಾಜ್ಯಸಭಾ ಸದಸ್ಯ ನಾಸೀರ್‌ಹುಸೇನ್, 10 ತಿಂಗಳಿಂದ ಪೊಲೀಸರ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡು ಓಡಾಡುತ್ತಿರುವುದು ಯಾಕೆ? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.
ವಿಧಾನಸೌಧದಲ್ಲಿ ರಾಜ್ಯಸಭೆಯ ಚುನಾವಣೆ ಗೆದ್ದಾಗ ನಾಸೀರ್‌ಹುಸೇನ್‌ಸಮ್ಮುಖದಲ್ಲೇ ಅವರ ಬೆಂಬಲಿಗರು “ಪಾಕಿಸ್ತಾನ್‌ಜಿಂದಾಬಾದ್” ಎಂದು ಘೋಷಣೆ ಕೂಗಿ ದೇಶದ್ರೋಹ ಕೃತ್ಯ ಎಸಗಿದ್ದರು.
ಕಾಂಗ್ರೆಸ್ಸಿಗರೇ ಸಂವಿಧಾನದ ಬಗ್ಗೆ ಗೌರವ ಇದ್ದರೇ ಮೊದಲು ನಾಸೀರ್‌ಹುಸೇನ್‌ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು ತಾಕೀತು ಮಾಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.