ಕುಮಾರಸ್ವಾಮಿ ವಿರುದ್ಧ “ಹಂದಿ” ಪದ ಬಳಸಿ ಅವಹೇಳನ ಕೇಡರ್ ಕಂಟ್ರೋಲ್ ಮೂಲಕ ಕ್ರಮ-ಜೋಶಿ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ
ಹಂದಿಪದ ಬಳಸಿ ಅವಹೇಳನ ಮಾಡಿರುವುದರ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕ್ಷಮಾಪಣೆ ಕೇಳಲಿ ಎಂದು ಜೋಶಿ ಅವರು ಸೂಚಿಸಿದ್ದಾರೆ.

ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಎಚ್ಚರಿಸಿದರು. ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಹೇಳಿದರು. 

ಎಡಿಜಿಪಿ ಬೆಲೆ ತೆರಬೇಕು-
ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿ ಚಂದ್ರಶೇಖರ್ ವರ್ತನೆ ಅಹಂಕಾರದ ಪರಮಾವಧಿಯಾಗಿದ್ದು
, ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರೆ ಗೌರವಯುತವಾಗಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್ ಆಡಳಿತಕ್ಕೆ ಹಿಡಿದ ಕೈಗನ್ನಡಿ-
ಲೋಕಾಯುಕ್ತ ಎಡಿಜಿಪಿ ಒಬ್ಬ ಜನಪ್ರತಿನಿಧಿ ಬಗ್ಗೆ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ ಎಂದು ಕೇಂದ್ರ ಸಚಿವ ಜೋಶಿ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಕೇಂದ್ರ ಸಚಿವ ಜೋಶಿ ಕಿವಿಮಾತು ಹೇಳಿದರು.

 

 

- Advertisement -  - Advertisement -  - Advertisement - 
Share This Article
error: Content is protected !!
";