ನಂದಿ ಹಿಲ್ ವ್ಯೂ ಶಾಲೆಯಲ್ಲಿ ಕಲೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ
  ಹೋಬಳಿ ದುರ್ಗೇನಹಳ್ಳಿ  ಗ್ರಾಮದ ಹೊರವಲಯದಲ್ಲಿರುವ ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯಲ್ಲಿ ಇತ್ತೀಚೆಗೆ ನಂದಿ ಕಲೋತ್ಸವಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಪೋಷಕರು ತಮ್ಮ ಮಕ್ಕಳನ್ನು ಪಠ್ಯಪುಸ್ತಕದ  ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಮತ್ತು ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳ ಆಸಕ್ತಿಗೆ  ಪ್ರಾಮುಖ್ಯತೆ ನೀಡಿ ಅವರಿಗೆ ಇಷ್ಟವಾದ ಶಿಕ್ಷಣ ಕೊಡಿಸಿದರೆ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ.‌ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಶಿಕ್ಷಣ ನೀಡಿ, ಮಕ್ಕಳಲ್ಲಿ ಸರ್ವತೋಮುಖ ಬೆಳವಣಿಗೆ ತರುವಲ್ಲಿ ಶ್ರಮಿಸುತ್ತಿರುವ ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯ ಕಾರ್ಯದರ್ಶಿ ಧನುಂಜಯ ಹಾಗೂ ಸಿಬ್ಬಂದಿ ವರ್ಗದವರನ್ನು ಶ್ಲಾಘಿಸಿದರು. 

ಶಾಲೆಯ ಕಾರ್ಯದರ್ಶಿ ಧನುಂಜಯ ಮಾತನಾಡಿ, ವಿದ್ಯಾರ್ಥಿ ಜೀವನ ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವುದು ಕಾಲಘಟ್ಟದ. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಪ್ರಜೆಗಳು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಆದ್ದರಿಂದ ಗ್ರಾಮಾಂತರ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಪಠ್ಯಕ್ರಮ ಬೋಧಿಸಲಾಗುತ್ತಿದೆ ಎಂದರು.

ಕಾರ್ಯಕ್ರಮ ಅಂಗ ವಾಗಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಪುಟಾಣಿ ಮಕ್ಕಳು  ನೃತ್ಯ ಪ್ರದರ್ಶನ ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಎಸ್ ಪಿ ಎಜುಕೇಶನ್  ಟ್ರಸ್ಟಿನ  ಅಧ್ಯಕ್ಷೆ ವರಲಕ್ಷ್ಮಿ ಧನುಂಜಯ, ಶಾಲೆಯ ಕಾರ್ಯದರ್ಶಿ ಧನುಂಜಯ, ರೈತ ಮುಖಂಡ  ತುರುವನಹಳ್ಳಿ ವಾಸು, ವಕೀಲ ಪ್ರತಾಪ್. ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಕಾರ್ಯದರ್ಶಿ ಉದಯ ಆರಾಧ್ಯ, ಲಕ್ಷ್ಮೀದೇವಿ ಪುರ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ವಂಸತಗೌಡ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಗೌಡ, ಮುಖಂಡ ಕನಕದಾಸ, ಹಳ್ಳಿ ರೈತ ಅಂಬರೀಶ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";