ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿರುವ ಕನ್ನಡದ ಪ್ರಖ್ಯಾತ ವಿಮರ್ಶಕರು, ಭಾಷಾ ವಿದ್ವಾಂಸರೂ ಆಗಿರುವ ಪ್ರೊ.ಕೆ.ವಿ.ನಾರಾಯಣ ಅವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಅವರ ‘ನುಡಿಗಳ ಅಳಿವು‘ ವಿಮರ್ಶಾ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ನನಗೆ ಸಂತಸ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.