ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿವಾಳಿಯಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.70% ಪ್ರಾಧ್ಯಾಪಕರು, ಉಪನ್ಯಾಸಕರ ಹುದ್ದೆಗಳು ಖಾಲಿ ಉಳಿದಿದ್ದರೂ, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ನೇಮಕಾತಿ ಮಾಡದೇ ನಿರ್ಲಕ್ಷ್ಯವಹಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಕೊರತೆಯಿಂದ ಹತ್ತಾರು ವಿಶ್ವವಿದ್ಯಾಲಯಗಳ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಶೈಕ್ಷಣಿಕ ಗುಣಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದು, ಉನ್ನತ ಶಿಕ್ಷಣ ಮರೀಚಿಕೆಯಾಗಿದೆ ಎನ್ನುವುದಕ್ಕೆ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಅವಲೋಕನಕ್ಕೆ ಸಿದ್ಧಪಡಿಸಿರುವ ವರದಿ ಸಾಕ್ಷಿಯಾಗಿದೆ ಎಂದು ಜೆಡಿಎಸ್ ತಿಳಿಸಿದೆ.

