ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸಪೇಟೆಯಲ್ಲಿ 2025ನೇ ಮೇ 20 ರಂದು ಆಯೋಜಿಸಿರುವ ಸರ್ಕಾರಿ ಕಾರ್ಯಕ್ರಮಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿವಿಧ ವಿಭಾಗಗಳಿಂದ (ಉತ್ತರಕನ್ನಡ, ಚಿಕ್ಕೋಡಿ ವಿಭಾಗ ಹೊರತುಪಡಿಸಿ) ಪ್ರಾಸಂಗಿಕ ಕರಾರಿನ ಮೇರೆಗೆ ಸಂಸ್ಥೆಯ 977 ವಾಹನಗಳನ್ನು ಒದಗಿಸಲಾಗುತ್ತಿರುವುದರಿಂದ ಮೇ 20 ರಂದು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.