ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಕಲೇಶಪುರದ ಎಪಿಎಂಸಿ ಮೈದಾನದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಕಂಚಿನ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರವ ಸಮರ್ಪಣೆ ಮಾಡಿದರು.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಂಸ್ಥಾನದ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸೇರಿದಂತೆ ಹಲವರು ಪೂಜ್ಯ ಶ್ರೀಗಳು ಉಪಸ್ಥಿತರಿದ್ದರು.
ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಸ್ವರೂಪ ಪ್ರಕಾಶ್, ಸಿಮೆಂಟ್ ಮಂಜು, ಮಾಜಿ ಶಾಸಕರಾದ ಲಿಂಗೇಶ್, ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.