ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಜಯಣ್ಣ ತಿಳಿಸಿದರು.
ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಜಯಣ್ಣ ತಿಳಿಸಿದರು.
ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಚಿತ್ರದುರ್ಗ ಜಿಲ್ಲಾ ಘಟಕದಿಂದ ಜಿಲ್ಲಾ ಕಚೇರಿ ಆವರಣದ ಜೆ.ಪಿ.ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ರಾಜ್ಯಾಧ್ಯಕ್ಷರು, ಕೇಂದ್ರ ಸರ್ಕಾರದ ಉಕ್ಕು ಮತ್ತು ಕೈಗಾರಿಕಾ ಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿಯವರ 65ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಾಡಿದ ವಿವಿಧ ರೀತಿಯ ಜನಪರ ಕಾರ್ಯಕ್ರಮಗಳನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ರೈತರ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ ಸೇರಿದಂತೆ ಹಲವು ರೈತ ಪರ ಯೋಜನೆಗಳನ್ನು ಈಗಲೂ ಜನರು ನೆನೆಯುತ್ತಾರೆ ಎಂದರು.
ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದ ಮಂತ್ರಿಯಾಗಿ ದೇಶಾದ್ಯಂತ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಆರಂಭಿಸುವ ಮೂಲಕ ನಿರುದ್ಯೋಗ ಸಮಸ್ಯೆ ಹೋಗಲಾಡಿಸಬೇಕು. ಜೊತೆಯಲ್ಲಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಮುಂದಾಗಲಿ.
ಅಲ್ಲದೆ ಭದ್ರಾವತಿ ಕಾರ್ಖಾನೆ, ಹೆಚ್ಎಂಟಿ ಕಾರ್ಖಾನೆ ಸೇರಿದಂತೆ ಮತ್ತಿತರ ಕಾರ್ಖಾನೆಗಳನ್ನು ಪುನಶ್ಚೇತನ ಮಾಡಲಿ ಎಂದು ಅವರು ತಾಕೀತು ಮಾಡಿದರು.
ಕುಮಾರಸ್ವಾಮಿ ಅವರಿಗೆ ಆರೋಗ್ಯ, ಆಶ್ವರ್ಯ, ಅಧಿಕಾರವನ್ನು ಭಗವಂತ ನೀಡಲಿ ಎಂದು ಜಯಣ್ಣ ಸ್ಮರಿಸಿದರು.
ಕುಮಾರಸ್ವಾಮಿ ಅವರಿಗೆ ಆರೋಗ್ಯ, ಆಶ್ವರ್ಯ, ಅಧಿಕಾರವನ್ನು ಭಗವಂತ ನೀಡಲಿ ಎಂದು ಜಯಣ್ಣ ಸ್ಮರಿಸಿದರು.
ನಗರಸಭೆಯ ಮಾಜಿ ಅಧ್ಯಕ್ಷರು, ಜೆಡಿಎಸ್‌ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಅಂಗವಾಗಿ ನೀಲಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಅವರಿಗೆ ನಾಡಿನ ಜನತೆಯ ಅನುಕೂಲಕ್ಕಾಗಿ ಭಗವಂತ ಆರೋಗ್ಯ, ಆಯಸ್ಸು ನೀಡಲೆಂದು ಪ್ರಾರ್ಥಿಸಿದ್ದೇವೆ.
ಮುಂದಿನ ದಿನದಲ್ಲಿ ಪಕ್ಷದ ಸಿದ್ದಾಂತದ ಅಡಿಯಲ್ಲಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸಲಾಗುವುದು ಅಲ್ಲದೆ ಗೆದ್ದೇ ಗೆಲ್ಲುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಜೆಡಿಎಸ್‌ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಣ್ಣ ತಿಮ್ಮಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಚಿತ್ರದುರ್ಗ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರಲ್ಲಾ, ಸದಸ್ಯರಾದ ಚಂದ್ರಶೇಖರ್, ಹೊಳಲ್ಕೆರೆ ಜೆಡಿಎಸ್ ಅಧ್ಯಕ್ಷ ಪರಮಶ್ವರಪ್ಪ, ರುದ್ರಣ್ಣ ಜಾಲಿಕಟ್ಟೆ, ಮಂಜುನಾಥ, ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ, ಯುವ ಘಟಕದ ಅಧ್ಯಕ್ಷ ಅಬು, ಹನುಮಂತಪ್ಪ, ಚಿದಾನಂದ, ಪುಟ್ಟ ಸೇರಿದಂತೆ ಇತರರು ಭಾಗವಹಿಸಿದ್ದರು.
Contents
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದರ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಜಯಣ್ಣ ತಿಳಿಸಿದರು.ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಚಿತ್ರದುರ್ಗ ಜಿಲ್ಲಾ ಘಟಕದಿಂದ ಜಿಲ್ಲಾ ಕಚೇರಿ ಆವರಣದ ಜೆ.ಪಿ.ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ರಾಜ್ಯಾಧ್ಯಕ್ಷರು, ಕೇಂದ್ರ ಸರ್ಕಾರದ ಉಕ್ಕು ಮತ್ತು ಕೈಗಾರಿಕಾ ಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿಯವರ 65ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಾಡಿದ ವಿವಿಧ ರೀತಿಯ ಜನಪರ ಕಾರ್ಯಕ್ರಮಗಳನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ರೈತರ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ ಸೇರಿದಂತೆ ಹಲವು ರೈತ ಪರ ಯೋಜನೆಗಳನ್ನು ಈಗಲೂ ಜನರು ನೆನೆಯುತ್ತಾರೆ ಎಂದರು.ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದ ಮಂತ್ರಿಯಾಗಿ ದೇಶಾದ್ಯಂತ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಆರಂಭಿಸುವ ಮೂಲಕ ನಿರುದ್ಯೋಗ ಸಮಸ್ಯೆ ಹೋಗಲಾಡಿಸಬೇಕು. ಜೊತೆಯಲ್ಲಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಮುಂದಾಗಲಿ.ಅಲ್ಲದೆ ಭದ್ರಾವತಿ ಕಾರ್ಖಾನೆ, ಹೆಚ್ಎಂಟಿ ಕಾರ್ಖಾನೆ ಸೇರಿದಂತೆ ಮತ್ತಿತರ ಕಾರ್ಖಾನೆಗಳನ್ನು ಪುನಶ್ಚೇತನ ಮಾಡಲಿ ಎಂದು ಅವರು ತಾಕೀತು ಮಾಡಿದರು.
ಕುಮಾರಸ್ವಾಮಿ ಅವರಿಗೆ ಆರೋಗ್ಯ, ಆಶ್ವರ್ಯ, ಅಧಿಕಾರವನ್ನು ಭಗವಂತ ನೀಡಲಿ ಎಂದು ಜಯಣ್ಣ ಸ್ಮರಿಸಿದರು.ನಗರಸಭೆಯ ಮಾಜಿ ಅಧ್ಯಕ್ಷರು, ಜೆಡಿಎಸ್‌ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಅಂಗವಾಗಿ ನೀಲಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಅವರಿಗೆ ನಾಡಿನ ಜನತೆಯ ಅನುಕೂಲಕ್ಕಾಗಿ ಭಗವಂತ ಆರೋಗ್ಯ, ಆಯಸ್ಸು ನೀಡಲೆಂದು ಪ್ರಾರ್ಥಿಸಿದ್ದೇವೆ.ಮುಂದಿನ ದಿನದಲ್ಲಿ ಪಕ್ಷದ ಸಿದ್ದಾಂತದ ಅಡಿಯಲ್ಲಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸಲಾಗುವುದು ಅಲ್ಲದೆ ಗೆದ್ದೇ ಗೆಲ್ಲುತ್ತೇವೆ ಎಂದರು.ಕಾರ್ಯಕ್ರಮದಲ್ಲಿ ಜೆಡಿಎಸ್‌ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಣ್ಣ ತಿಮ್ಮಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಚಿತ್ರದುರ್ಗ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರಲ್ಲಾ, ಸದಸ್ಯರಾದ ಚಂದ್ರಶೇಖರ್, ಹೊಳಲ್ಕೆರೆ ಜೆಡಿಎಸ್ ಅಧ್ಯಕ್ಷ ಪರಮಶ್ವರಪ್ಪ, ರುದ್ರಣ್ಣ ಜಾಲಿಕಟ್ಟೆ, ಮಂಜುನಾಥ, ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ, ಯುವ ಘಟಕದ ಅಧ್ಯಕ್ಷ ಅಬು, ಹನುಮಂತಪ್ಪ, ಚಿದಾನಂದ, ಪುಟ್ಟ ಸೇರಿದಂತೆ ಇತರರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆಗೆ ನೂತನವಾಗಿ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ನಸ್ರುಲ್ಲಾ ಅವರನ್ನು ಜೆಡಿಎಸ್ ವತಿಯಿಂದ ಸನ್ಮಾನಿಸಲಾಯಿತು.