ಚಂದ್ರವಳ್ಳಿ ನ್ಯೂಸ್, ಅಜ್ಜಂಪುರ:
ಜಿಲ್ಲೆಯ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಚಿರತೆ ಸೆರೆಯಾಗುತ್ತಿದ್ದಂತೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದ ತಿಮ್ಮಣ್ಣ ಎಂಬವರ ಮನೆ ಸಮೀಪ ಸುಳಿದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.
ಪದೇ ಪದೇ ಗ್ರಾಮದಲ್ಲಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಎರಡು-ಮೂರು ದಿನಗಳಿಂದ ಚಿರತೆ ಪ್ರತ್ಯಕ್ಷವಾಗುತ್ತಿದ್ದ ಜಾಗದಲ್ಲೇ ಬೋನಿರಿಸಿದ್ದರಿಂದ ಕಳೆದ ರಾತ್ರಿ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯ ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಬಿಟ್ಟಿದ್ದಾರೆ.

