ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಆಗಿರುವ ಪ್ರಕರಣದಲ್ಲಿ ಅಂದಿನ ಮೈಸೂರು ಜಿಲ್ಲಾಧಿಕಾರಿ ಮತ್ತು ಹಾಲಿ ಕಾಂಗ್ರೆಸ್ ಸಂಸದ ಕುಮಾರ್ ನಾಯಕ ಅವರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ಸಾಬೀತಾಗಿದ್ದು,
ಸಂಸದ ಕುಮಾರ ನಾಯಕ ಅವರ ರಾಜೀನಾಮೆ ಪಡೆಯಬೇಕೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಅಷ್ಟೇ ಅಲ್ಲದೆ ಲೋಕಾಯುಕ್ತ ವರದಿಯಲ್ಲಿ ಶಿಫಾರಸು ಮಾಡಿರುವಂತೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನ ಅಶೋಕ್ ಅವರು ಒತ್ತಾಯಿಸಿದ್ದಾರೆ.