ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿದ್ಯಾರ್ಥಿಗಳು ವಿಜ್ಞಾನ ಅಧ್ಯಯನ ಮಾಡಿ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದರ ಮೂಲಕ ಸಂಶೋಧನೆಯ ಕಡೆಗೆ ಹೆಚ್ಚು ಒತ್ತು ನೀಡಲಿ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ತಿಳಿಸಿದರು.
ಚಿತ್ರದುರ್ಗದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಖಗೋಳ ವಿಸ್ಮಯ” ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು.
ವಿಜ್ಞಾನ ವಿಷಯವು ಕೇವಲ ಜ್ಞಾನಾರ್ಜನೆಗೆ ಸೀಮಿತವಾಗದೆ, ಬದುಕನ್ನು ಹಸನಾಗಿಸಬೇಕು ಹಾಗೂ ಸಮಾಜಕ್ಕೆ ಉಪಯುಕ್ತವಾಗಬೇಕು. ವಿದ್ಯಾರ್ಥಿಗಳು ಸೃಜನಾತ್ಮಕ ಹಾಗೂ ಆತ್ಮಸ್ಥೈರ್ಯ, ಕ್ರಿಯಾಶೀಲ ಮನೋಭಾವ ಬೆಳೆಸಿಕೊಂಡು ಹೊಸ ಹೊಸ ಸಂಶೋಧನೆಯ ಕಡೆಗೆ ಗಮನ ನೀಡಲಿ ಎಂದು ಖಗೋಳ ವಿಸ್ಮಯ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರಚಾರ್, ಉಪನ್ಯಾಸಕರಾದ ರಮೇಶ್, ಹರೀಶ್ ಹಾಗೂ ಸೈನ್ಸ್ ಫೌಂಡೇಶನ್ ಖಜಾಂಚಿ ನಾಗಲಿಂಗರೆಡ್ಡಿ ಉಪಸ್ಥಿತರಿದ್ದರು.