ಓಜ ಶ್ರೀ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗ ಜಿಲ್ಲೆಯ ಸಾಹಿತ್ಯ ದಿಗ್ಗಜರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಪ್ರಾಧ್ಯಾಪಕರ ಸಂಘದ ಸರ್ವ ಸದಸ್ಯರ ಅಧಿವೇಶನವು ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಜಾನಪದ, ಸಂಕಿರ್ಣ ಸಾಹಿತ್ಯ ಹಾಗೂ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮತ್ತು

- Advertisement - 

ಆರ್ಥಿಕ ಅಭಿವೃದ್ಧಿಯ ವಿವಿಧ ಆಯಾಮಗಳಲ್ಲಿ ವಿಶೇಷ ಕೃಷಿ ಮಾಡಿ, ಮೌಲ್ವಿಕ ಕೃತಿಗಳನ್ನು ಪ್ರಕಟಿಸಿರುವ ಮತ್ತು ಶಿಕ್ಷಣ ತಜ್ಞರು ಹಾಗೂ ಸಾಧಕರಾದ  ವಿಶ್ರಾಂತ ಪ್ರಾಧ್ಯಾಪಕರುಗಳಿಗೆ “ಓಜ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement - 

“ಓಜ ಶ್ರೀ” ಪ್ರಶಸ್ತಿಗೆ ಭಾಜನರಾದ ಜಾನಪದ ವಿದ್ವಾಂಸರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಲೇಖಕ ಪ್ರೊ.ಹೆಚ್.ಲಿಂಗಪ್ಪ, ಬರಹಗಾರ ಪ್ರೊ.ಟಿ.ವಿ. ಸುರೇಶ್ ಗುಪ್ತ, ಬಂಡಾಯ ಸಾಹಿತಿ ಡಾ.ಸಿ.ಶಿವಲಿಂಗಪ್ಪ ಮೀರಾಸಾಬಿಹಳ್ಳಿ, ಪ್ರೊ.ಸಿ.ವಿ.ಪಾಟೀಲ್,

- Advertisement - 

ಆರ್ಥಿಕ ತಜ್ಞ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಶಿಕ್ಷಣ ತಜ್ಞ ಡಾ.ಡಿ.ಎಸ್.ಪ್ರಕಾಶ್ ಹಿರೇಹಳ್ಳಿ ಇವರುಗಳಿಗೆ ಚಿತ್ರದುರ್ಗ ಜಿಲ್ಲಾ ಪದವಿ ಕಾಲೇಜು ನಿವೃತ್ತ ಅಧ್ಯಾಪಕ ಸಂಘದ ಅಧ್ಯಕ್ಷ ಪ್ರೊ.ಟಿ.ಹೆಚ್.ಕೃಷ್ಣಮೂರ್ತಿ ಹಾಗೂ ಸಹೃದಯರು ಶುಭಾಶಯಗಳೊಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

Share This Article
error: Content is protected !!
";