ಭ್ರಷ್ಟ ಅಧಿಕಾರಿ ಎಸಿಎಫ್ ಸುರೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ
1ಕೆಜಿ ಚಿನ್ನಾಭರಣ, 3 ನಿವೇಶನ, 9 ಎಕರೆ ಜಮೀನು, 5 ಲಕ್ಷ ನಗದು ಪತ್ತೆ
ಚಂದ್ರವಳ್ಳಿ ನ್ಯೂಸ್,
ಹಿರಿಯೂರು :
ಹಿರಿಯೂರು ಅರಣ್ಯ ಇಲಾಖೆಯ ಎಸಿಎಫ್ ಸುರೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ
ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರ
ಮ ಆಸ್ತಿ ಪತ್ತೆ ಮಾಡಿದ್ದಾರೆ. ದಾಳಿ ವೇಳೆ 1 ಕೆಜಿ ಚಿನ್ನಾಭರಣ, 3 ನಿವೇಶನಗಳು, 9 ಎಕರೆ ಜಮೀನು ಸೇರಿದಂತೆ 5 ಲಕ್ಷ ನಗದು ಪತ್ತೆಯಾಗಿದೆ.
ಹಿರಿಯೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಅವರು ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸುರೇಶ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ಹಾಗೂ ಚಳ್ಳಕೆರೆಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಕ್ಕೆ ಪಡೆದರು.
ಅಪಾರ ಪ್ರಮಾಣದ ಆಸ್ತಿ ಹೊಂದಿರುವುದು ದಾಳಿ ವೇಳೆ ಕಂಡುಬಂದಿದೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗಿದೆ.