ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯದ ಪ್ರತಿಷ್ಠಿತ ಆಶ್ರಮಗಳಲ್ಲೊಂದಾದ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ನೂತನ ಅಧ್ಯಕ್ಷರಾಗಿ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಮಲ್ಲಾಡಿಹಳ್ಳಿಯ ವಿಶ್ವಸ್ತ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆಂದು ಸಮಿತಿಯ ಕಾರ್ಯದರ್ಶಿ ಎಸ್. ಕೆ. ಬಸವರಾಜನ್ ರವರು ಘೋಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವಸ್ತ ಸಮಿತಿಯ ಉಪಾಧ್ಯಕ್ಷರು, ಆಶ್ರಮದ ಟ್ರಸ್ಟಿಗಳು, ಮುಖಂಡರು ಉಪಸ್ಥಿತರಿದ್ದರು.
ನಂತರ ಅನಾಥ ಸೇವಾಶ್ರಮದ ಹಿರಿಯ ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮೀಜಿ ಹಾಗೂ ಸುರ್ದಾಸ್ ಜಿ ರವರ ಗದ್ದುಗೆಗೆ ಪೂಜೆ ಸಲ್ಲಿಸುವ ಮುಖಾಂತರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಅನಾಥ ಸೇವಾಶ್ರಮದ ಭಕ್ತರು, ಅಭಿಮಾನಿಗಳು, ಶಾಲಾ, ಕಾಲೇಜ್ ಗಳ ಮಕ್ಕಳು, ಮಲ್ಲಾಡಿಹಳ್ಳಿಯ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.