ಆರೋಗ್ಯದ ಕಡೆ ಯುವ ಜನತೆ ಎಚ್ಚರವಹಿಸಲಿ- ಡಾ.ಸುಧಾ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೇಶ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ  ಮುಖ್ಯವಾಗಿದ್ದು, ದೇಶದ ಯುವ ಜನತೆ ಆರೋಗ್ಯ ಕಡೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಕಾರ್ಯಕ್ರಮ  ಅಧಿಕಾರಿ ಡಾ.ಸಿ..ಸುಧಾ ಹೇಳಿದರು.

ನಗರದ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಘಟಕ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ  ಹಾಗೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಯುವ ಜನರು ಏಡ್ಸ್ ನಂತಹ ಕಾಯಿಲೆಗಳಿಂದ, ಅದರ ಬಗ್ಗೆ ತಿಳಿದುಕೊಂಡು ದೂರವಿರಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ರೂಪಶ್ರೀ ಅವರು ಯುವ ಜನತೆಗೆ ಎಚ್ಐವಿ ಏಡ್ಸ್ ಕುರಿತು ಹರಡುವ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಮೇಲ್ವಿಚಾರಕ ವಿ.ಅಶೋಕ್ ಅವರು ಎಚ್ಐವಿ ಏಡ್ಸ್ ನಿಯಂತ್ರಣದಲ್ಲಿ ಯುವ ಜನತೆಯ ಪಾತ್ರ ಕುರಿತು ಮಾಹಿತಿ ನೀಡಿದರು.

ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಎಚ್ಐವಿ ಏಡ್ಸ್ ಕುರಿತು ಬಿತ್ತಿ ಚಿತ್ರ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಕ್ರಮವಾಗಿ ಎಚ್.ಎನ್.ಕಾವ್ಯ, ಅಂಜಲಿ, ಕೆ.ಎಂ.ಅನುಷಾ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸಿ.ಅನಂತ ರಾಮು, ಡಾ. ರಾಜಪ್ಪ, ಪ್ರೊ.ರಾಜು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.

 

Share This Article
error: Content is protected !!
";