ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗವು ಬುಧವಾರ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಇದೇ ಸಂದರ್ಭದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಕರ್ನಾಟಕದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿ ಆಗಮಿಸುವಂತೆ ಕೋರಿದರು.
ಹೂಡಿಕೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಅವರ ಬದ್ಧತೆಯನ್ನು ನೋಡಿ ಸಂತೋಷವಾಯಿತು. ಈವೆಂಟ್ ಉತ್ತಮ ಯಶಸ್ಸನ್ನು ಬಯಸುತ್ತದೆ! ಎಂದು ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.