ಶಿವಮೊಗ್ಗ ವಿಭಾಗದ ಬಿಜೆಪಿಯ ಪ್ರಮುಖರ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗ ವಿಭಾಗದ ಪ್ರಮುಖರ ಸಭೆ” ಶಿವಮೊಗ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿಭಾಗದ ಪ್ರಮುಖರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗವಹಿಸಿದ್ದರು.

 ಸದ್ಯದಲ್ಲೇ ಎದುರಾಗಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸಂಘಟನೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಕರೆ ನೀಡಲಾಯಿತಲ್ಲದೇ, ಸದ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಸಾಮಾನ್ಯರು ಆಕ್ರೋಷಿತರಾಗಿದ್ದು ಜನವಿರೋಧಿ ಸರ್ಕಾರದ ವಿರುದ್ಧದ ಎಲ್ಲ ಹೋರಾಟಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂಬ ಮನವಿ ಮಾಡಲಾಯಿತು.

- Advertisement - 

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರೂಪಾಲಿ ನಾಯಕ್‌, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಶಾಂತಾರಾಂ ಸಿದ್ಧಿ, ಡಾ. ಧನಂಜಯ್‌ ಸರ್ಜಿ, ಮಾಜಿ ಶಾಸಕರಾದ ಜೀವರಾಜ್, ಡಿ.ಎಸ್.ಸುರೇಶ್, ಸುನೀಲ್ ನಾಯ್ಕ್, ಅಶೋಕ್ ನಾಯಕ್,

ಸುನಿಲ್ ಹೆಗಡೆ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ, ಜಿಲ್ಲಾಧ್ಯಕ್ಷರಾದ ಎನ್.ಕೆ. ಜಗದೀಶ್,  ಎನ್.ಎಸ್.ಹೆಗಡೆ, ದೇವರಾಜ್ ಶೆಟ್ಟಿ, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";