ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ಆಫ್ ಇಂಡಿಯಾ ಪರೀಕ್ಷಾ ಕೇಂದ್ರಕ್ಕೆ ಜಮೀನು-ಸಚಿವ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯದಲ್ಲಿ ಸ್ಥಾಪನೆ ಆಗಲಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ಆಫ್ ಇಂಡಿಯಾ (ಎಆರ್ಎಐ) ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಜಮೀನು ನೀಡುವುದಾಗಿ ಈಗಾಗಲೇ ತಿಳಿಸಿದ್ದೆವು, ಅದರಂತೆ ಈ ಸ್ಥಳ ಪರಿಶೀಲನೆ ನಡೆಯುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ನಮ್ಮ ಕೆಐಎಡಿಬಿ ಅಧಿಕಾರಿಗಳು, ಎಆರ್ಎಐ ಸಂಸ್ಥೆಯ ಅಧಿಕಾರಿಗಳೊಂದಿಗೆ ತೆರಳಿ ಯೋಜನೆಗೆ ಸೂಚಿಸಿದ ಜಾಗದ ಪರಿವೀಕ್ಷಣೆಯಲ್ಲಿ ಪಾಲ್ಗೊಂಡಿದ್ದಾರೆ. ಯೋಜನೆಯ ಅನುಷ್ಠಾನದಲ್ಲಿ ಸೂಕ್ತ ಸಹಭಾಗಿತ್ವ-ಸಹಕಾರ ನೀಡುತ್ತಿದ್ದೇವೆ.

- Advertisement - 

ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರದ ಹಾಗೂ ನಮ್ಮ ಇಲಾಖೆಯ ಬೆಂಬಲ ಸದಾ ಇರಲಿದೆ ಎಂದು ಸಚಿವ ಪಾಟೀಲ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";