ಬೆಳೆ ಕಟಾವು ನಂತರ ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಸಚಿವ ಸೋಮಣ್ಣ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದಾವಣಗೆರೆಚಿತ್ರದುರ್ಗತುಮಕೂರು ನೇರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಬೆಳೆ ಕಟಾವು ಮಾಡಿಕೊಂಡ ನಂತರ ಇನ್ನೂ ಒಂದು ತಿಂಗಳೊಳಗೆ ಆರಂಭಿಸುವಂತೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

- Advertisement - 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರುಚಿತ್ರದುರ್ಗದಾವಣಗೆರೆ ಹಾಗೂ ರಾಯದುರ್ಗಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು.

- Advertisement - 

ನೇರ ರೈಲ್ವೆ ಮಾರ್ಗ ಯೋಜನೆಯ ದಾವಣಗೆರೆಭರಮಸಾಗರಚಿತ್ರದುರ್ಗ ಮಧ್ಯದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ರೈತರು ಬೆಳೆಗಳನ್ನು ಬೆಳೆದಿದ್ದಾರೆ.

ರೈತರಿಗೆ ತೊಂದರೆಯಾಗದಂತೆ ಇನ್ನೂ 1 ತಿಂಗಳ ಬಳಿಕ ಬೆಳೆ ಕಟಾವು ನಂತರ ರೈಲ್ವೆ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement - 

 

Share This Article
error: Content is protected !!
";