ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ #GST ಸುಧಾರಣೆಯನ್ನು ಅನುಮೋದಿಸಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರ ಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ.
ಹೊಸ ಸುಧಾರಣೆಯೊಂದಿಗೆ GST ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ MSMEಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ.
ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

