ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದ ಮಹಾಜನರ ಬಹುನಿರೀಕ್ಷಿತವಾಗಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಭಾನುವಾರ ಲೋಕಾರ್ಪಣೆ ಮಾಡಿದರು ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಈ ಮಾರ್ಗವು ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ 19 ಕಿ.ಮೀ. ದೂರದ ಎತ್ತರದ ಕಾರಿಡಾರ್‌ನಲ್ಲಿ 16 ನಿಲ್ದಾಣಗಳನ್ನು ಸಂಪರ್ಕಿಸುತ್ತದೆ.

- Advertisement - 

ಈ ಮಾರ್ಗದಿಂದ ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇಔಟ್ ಮತ್ತು ಸಿಲ್ಕ್ ಬೋರ್ಡ್‌ನಂತಹ ಅತ್ಯಂತ ಪ್ರಮುಖ ತಂತ್ರಜ್ಞಾನ ತಾಣಗಳಿಗೆ ಪ್ರಯಾಣವನ್ನು ಪರಿವರ್ತನಾತ್ಮಕವಾಗಿ ಸುಗಮಗೊಳಿಸುತ್ತದೆ. ಈ ಭಾಗದಲ್ಲಿ ರಸ್ತೆಗಳ ಮೇಲೆ ವಾಹನಗಳ ಒತ್ತಡವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಅಲ್ಲದೆ, ಬೆಂಗಳೂರು ನಗರದ ಆರ್ಥಿಕ, ಕೈಗಾರಿಕಾ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಸಶಕ್ತ ನೇತೃತ್ವದಲ್ಲಿ ಭಾರತವು ಸದೃಢ ಹಾಗೂ ದೂರಗಾಮಿ ಸಂಚಾರ ವ್ಯವಸ್ಥೆಯನ್ನು ಹೊಂದುತ್ತದೆ. ಇದರಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವೂ ಭಾಗವಾಗುತ್ತಿರುವುದು ನನಗೆ ಅತೀವ ಸಂತೋಷ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement - 

 

 

Share This Article
error: Content is protected !!
";