ಬಸ್ ಅಪಘಾತ : ಇಪ್ಪತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ

News Desk

ಬಸ್ ಅಪಘಾತ : ಇಪ್ಪತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಮAಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿರುವ ರಾಜ್ಯ ಸಾರಿಗೆ ಬಸ್ ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿ ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ತಕ್ಷಣವೇ ಸ್ಪಂದಿಸಿ ಜಿಲ್ಲಾ ವೈದ್ಯಾಧಿಕಾರಿಗಳ ಜತೆ ಮಾತನಾಡಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದೇನೆ ಹಾಗೂ ಗಾಯಾಳುಗಳಿಗೆ ಅಗತ್ಯವಾದ ತುರ್ತುಚಿಕಿತ್ಸೆ ನೀಡಬೇಕು ಎಂದು ಸೂಚಿಸಿದ್ದೇನೆ ಎಂದರು.

ತೀವ್ರವಾಗಿ ಗಾಯಗೊಂಡಿರುವವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಗಾಯಾಳುಗಳೆಲ್ಲರೂ ಆದಷ್ಟು ಶೀಘ್ರವಾಗಿ ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳಲಿ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Share This Article
error: Content is protected !!
";