ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ನಡೆಯುತ್ತಿರುವ ಮಾಜಿ ಪ್ರಧಾನಿ ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ನಿಮಿತ್ತ ಅಟಲ್ ಜಿ ಅವರೊಂದಿಗೆ ಒಡನಾಟ ಹೊಂದಿದ್ದ ರಾಜ್ಯದ ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ನೀಡುವ ಕಾರ್ಯಕ್ರಮದ ಭಾಗವಾಗಿ ಚಿತ್ರದುರ್ಗದಲ್ಲಿ ಬಿಜೆಪಿ ಹಿರಿಯ ನಾಯಕ ಶಿವಣ್ಣಾಚಾರ್ ಅವರಿಗೆ ಜಿಲ್ಲಾ ಸಮಿತಿಯ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು ಎಂದು ಬಿಜೆಪಿ ತಿಳಿಸಿದೆ.
ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಸೇರಿದಂತೆ ಪಕ್ಷದ ಮುಖಂಡರು ಭಾಗಿಯಾಗಿದ್ದರು.