E-PAPER
23 Nov 2026, 09:53:43 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜೆಡಿಎಸ್ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ
, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನದ ಅಂಗವಾಗಿ ಅವರಿಗೂ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು.

​​ಗೌರವ ಸಲ್ಲಿಕೆ: ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು ಹಾಗೂ ಬಾಬು ಜಗಜೀವನ್ ರಾಮ್ ಅವರ ಕೃಷಿ ಕ್ರಾಂತಿಯ ಕೊಡುಗೆಗಳನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ​ನಾಯಕರ ಉಪಸ್ಥಿತಿ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.



​​ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಪದಾಧಿಕಾರಿಗಳು ಸೇರಿದಂತೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ​ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ.ಕೆ ಅನ್ನದಾನಿ, ವಿಧಾನ ಪರಿಷತ್ ಶಾಸಕ ಟಿ.ಎ. ಶರವಣ, ಶಾಸಕರಾದ ರಾಜುಗೌಡ, ಜವರಾಯ ಗೌಡ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರ ನಾಯಕರು ಇದ್ದರು.​

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಶೋಷಿತ ವರ್ಗದ ಹಿತ ಕಾಯುವ ನಿಟ್ಟಿನಲ್ಲಿ ಪಕ್ಷವು ಸದಾ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ನಾಯಕರು ಪುನರುಚ್ಚರಿಸಿದರು. ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಭಾಗಿಯಾಗಿ ಮಹಾನ್ ಪುರುಷರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!