Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಲ್ತುಳಿತ 11 ಸಾವು, ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳು-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡುಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ  ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿ ಮಾತನಾಡಿ ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಡಿಪಿಎಆರ್ ನಿಂದ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು.

ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಅದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ.

ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ನನಗೆ ಮತ್ತು ಸರ್ಕಾರಕ್ಕೆ ನೋವು ತಂದಿದೆ.

ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲವಾದರೂ ಘಟನೆ ದು:ಖ ತಂದಿದೆ.

ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಹೇಳಿ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯ ಇಬ್ಬದಿತನದ ನಿಲುವನ್ನು ತೋರಿಸುತ್ತದೆ.

ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದು ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು