Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಕ್ಪ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು.

ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

 ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ.

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ.

ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಅವರು ಆಗ್ರಹ ಮಾಡಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು