Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ.ಕೆ.ಶಿವಕುಮಾರ್ ವಿರುದ್ಧದ 3 ಲಕ್ಷ ಕೋಟಿ ನೈಸ್ ಹಗರಣ ಆರೋಪ: ಸಚಿವರ ವಿರುದ್ಧ ಹೆಚ್.ಡಿಕೆ ತೀವ್ರ ವಾಗ್ದಾಳಿ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಇದಕ್ಕೆ ತೀವ್ರವಾಗಿ ತಿರುಗೇಟು ನೀಡಿರುವ ಹೆಚ್.ಡಿಕೆ, ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ದಾಖಲೆಗಳನ್ನು ಓದುವ ಬೌದ್ಧಿಕ ಸಾಮರ್ಥ್ಯವಿಲ್ಲದೆ ಸೈಡ್ ವಿಂಗ್ ನಾಲಿಗೆಗಳು ವ್ಯರ್ಥ ಸಮರ್ಥನೆಗೆ ಇಳಿದಿವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಕ್ರಮ ಸಮರ್ಥನೆಯ ಭಯ: ಸಿಎಂ ಸಾಹೇಬರ ಅಕ್ರಮ ಸಂಪತ್ತನ್ನು ಸಮರ್ಥಿಸಿಕೊಳ್ಳದಿದ್ದರೆ ಸಂಪುಟದಲ್ಲಿ ಉಳಿಗಾಲವಿಲ್ಲ ಎಂಬ ಭಯದಿಂದಲೇ ಸಚಿವರು ಕಿರುಚಾಡುತ್ತಿದ್ದಾರೆ ಎಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.

Advertisement

ಹಿಂದಿನ ಅವಧಿಯ ಹಗರಣಗಳ ಪ್ರಸ್ತಾಪ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಜೆ.ಎಚ್.ಪಟೇಲರ ಕಾಲದ ರಾಜಕೀಯ ಬೆಳವಣಿಗೆಗಳನ್ನು ಸ್ಮರಿಸಿರುವ ಅವರು, ಆಕ್ಸ್ಫರ್ಡ್ ಯುನಿವರ್ಸಿಟಿ ಪದವೀಧರರ ಸರ್ಕಾರದಲ್ಲಿ ಹಾಲಿ ಸಿಎಂ ನಗರಾಭಿವೃದ್ಧಿ ಸಚಿವರಾಗಿ ಮತ್ತು BMICPA ಅಧ್ಯಕ್ಷರಾಗಿ ಎಸಗಿರುವ ಅಕ್ರಮಗಳಿಗೆ ದಾಖಲೆಗಳೇ ಸಾಕ್ಷಿ ಎಂದಿದ್ದಾರೆ.

3 ಲಕ್ಷ ಕೋಟಿ ನೈಸ್ ಹಗರಣ: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ಕಾರಿಡಾರ್ ಹೆಸರಿನಲ್ಲಿ ಸಾರ್ವಜನಿಕರ ಭೂಮಿ ಕಿತ್ತುಕೊಂಡು ರಿಯಲ್ ಎಸ್ಟೇಟ್ ದಂಧೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಬಿಐ ತನಿಖೆಗೆ ಆಗ್ರಹ: ನೈಸ್ ಭೂಮಿ ಹಗರಣವು 2ಜಿ ಮತ್ತು ಕಲ್ಲಿದ್ದಲು ಹಗರಣವನ್ನು ಮೀರಿಸುವಂತಹದ್ದು ಹಾಗೂ ಸುಮಾರು 3 ಲಕ್ಷ ಕೋಟಿ ರೂ.ಗಳಿಗೂ ಮೀರಿದ ದೇಶದ ಅತಿದೊಡ್ಡ ಹಗರಣವಾಗಿದೆ. ಈ ಬಗ್ಗೆ ಸಿಬಿಐನಂತಹ ಉನ್ನತ ಸಂಸ್ಥೆಗಳಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಬಲವಾಗಿ ಆಗ್ರಹಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ