E-PAPER
24 Nov 2026, 10:42:11 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿದ್ಯಾರ್ಥಿನಿಯರಿಗೆ 30 ಸಾವಿರ ದೀಪಿಕಾ ವಿದ್ಯಾರ್ಥಿ ವೇತನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.


ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ  ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ  ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ.ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು ಎಂದರು.

ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ.

ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.

ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು