E-PAPER
24 Nov 2026, 02:28:38 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸೈಬರ್ ವಂಚಕರಿಂದ 378 ಕೋಟಿ ಲೂಟಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೈಬರ್ ವಂಚಕರು
378 ಕೋಟಿ ರೂ ಲೂಟಿ ಮಾಡಿರುವ ಘಟನೆ ಬೆಂಗಳೂರಿನ
ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನಲ್ಲಿ ನಡೆದಿದೆ.
ಸೈಬರ್ ವಂಚಕರು ಕಂಪನಿಯ ವ್ಯಾಲೆಟ್​​ ಹ್ಯಾಕ್​ ಮಾಡಿ
378 ಕೋಟಿ ರೂ (44 ಮಿಲಿಯನ್​ ಅಮೆರಿಕನ್ ಡಾಲರ್)​ ಲೂಟಿ ಮಾಡಿದ್ದಾರೆ.

ಈ ಕುರಿತು ಕಂಪನಿಯ ಸಾರ್ವಜನಿಕ ನೀತಿ ಹಾಗೂ ಸರ್ಕಾರಿ ವ್ಯವಹಾರಗಳ ವಿಭಾಗದ ಉಪಾಧ್ಯಕ್ಷ ಹರ್ದೀಪ್ ಸಿಂಗ್ ನೀಡಿರುವ ದೂರಿನ ಆಧಾರದಲ್ಲಿ ವೈಟ್‌ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ:
ಇಷ್ಟು ದೊಡ್ಡ ಮೊತ್ತ ವಂಚನೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿ ಆಂತರಿಕ ತನಿಖೆ ನಡೆಸಿದೆ. ಕಂಪನಿ ಉದ್ಯೋಗಿ ರಾಹುಲ್​ ಅಗರ್ವಾಲ್​ ಎಂಬವರಿಗೆ ಕೆಲಸ ಮಾಡಲು ಕಂಪನಿ ಲ್ಯಾಪ್​ಟಾಪ್​ ನೀಡಿತ್ತು. ಸೈಬರ್ ಕಳ್ಳರು ಈ ಲ್ಯಾಪ್​ಟಾಪ್‌ನ ವ್ಯಾಲೆಟ್​​ ಹ್ಯಾಕ್​ ಮಾಡಿದ್ದಾರೆ.


ಈ ವೇಳೆ, ರಾಹುಲ್​ ಅಗರ್ವಾಲ್​ ಅವರು ಕಂಪನಿ ಲ್ಯಾಪ್​ಟಾಪ್​ ಅನ್ನು ಮತ್ತೊಂದು ಪಾರ್ಟ್​​ಟೈಂ ಉದ್ಯೋಗಕ್ಕೆ ಬಳಸಿರುವುದು ಗೊತ್ತಾಗಿದೆ. ಕಳೆದ ಒಂದು ವರ್ಷದಿಂದ ಪಾರ್ಟ್​ಟೈಮ್​ ಉದ್ಯೋಗದ ಮೂಲಕ ಅಗರ್ವಾಲ್ 15 ಲಕ್ಷ ರೂ ಸಂಪಾದಿಸಿರುವುದೂ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಈತನೇ ಬೇರೆ ವ್ಯಕ್ತಿಗಳೊಂದಿಗೆ ಸೇರಿ ಈ ವಂಚನೆ ಎಸಗಿರುವ ಸಾಧ್ಯತೆ ಇದೆ ಎಂದು ಕಂಪನಿ ದೂರಿನಲ್ಲಿ ತಿಳಿಸಿದೆ.

ಉದ್ಯೋಗಿ ವಶಕ್ಕೆ: "ನೆಬಿಲೋ ಟೆಕ್ನಾಲಜೀಸ್​ ಪ್ರೈವೇಟ್​ ಲಿಮಿಟೆಡ್​ನಲ್ಲಿ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ರಾಹುಲ್​ ಅಗರ್ವಾಲ್​, ಆತನ ಲ್ಯಾಪ್​ಟಾಪ್​ನಿಂದ ಕಂಪನಿಯ ಕ್ರಿಪ್ಟೋ ಕರೆನ್ಸಿ ವರ್ಗಾವಣೆಯಾಗಿರುವ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್​ ವಂಚನೆ ಪ್ರಕರಣದಲ್ಲಿ ಆತನ ಕೈವಾಡವಿದೆಯೇ ಎಂಬ ಕುರಿತು ತನಿಖೆ ನಡೆಯುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!