E-PAPER
24 Nov 2026, 03:50:01 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ರಾಬರಿ ಗ್ಯಾಂಗ್ ನಿಂದ 400 ಕೋಟಿ ದರೋಡೆ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಖತರ್ನಾಕ್ ರಾಬರಿ ಗ್ಯಾಂಗ್ ಬರೋಬ್ಬರಿ 400 ಕೋಟಿ ದರೋಡೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಜರುಗಿದೆ. ಇದು ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿ, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ನಗದರಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​, ಜನವರಿ 6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್​ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ ಆಗಿರಬಹುದು ಅಂತಾ ಪತ್ರದಲ್ಲಿತ್ತು ಎಂದು ಮಾಹಿತಿ ನೀಡಿದರು.

ವಿಶಾಲ್ ನಾಯ್ಡು ಎಂಬಾತ ನಾಸಿಕ್​ನಲ್ಲಿ ಅಕ್ಟೋಬರ್ 22ರಂದು ಸಂದೀಪ್ ಪಾಟೀಲ್ ಎಂಬಾತನ ಕಿಡ್ನ್ಯಾಪ್ ಮಾಡಿರುತ್ತಾರೆ. ಅಕ್ಟೋಬರ್ 16ರಂದು 400 ಕೋಟಿ ರೂ ಅಪಹರಣವಾಗಿದೆ. ಆ ಹಣ ಎಲ್ಲಿಗೆ ಹೋಗಿದೆ ಅಂತಾ ಪ್ರಶ್ನೆ ಮಾಡುತ್ತಾರೆ. ಈ ರಾಬರಿ ಆಗಿದ್ದು ಚೋರ್ಲಾ ಘಾಟ್​ನಲ್ಲಿ ಅಂತಾ ಪತ್ರದಲ್ಲಿ ಉಲ್ಲೇಖವಿದೆ. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್-ಇನ್ಸ್‌ಪೆಕ್ಟರ್ ಸೇರಿ ಒಂದು ತಂಡ ಕಳುಹಿಸಿದ್ದೇವೆ ಎಂದು ಎಸ್ಪಿ ತಿಳಿಸಿದರು.

ಎಸ್ಐಟಿ ರಚನೆ- ಎಸ್ಐಟಿ ಕೂಡ ರಚನೆ ಮಾಡಲಾಗಿದೆ. ಸಂದೀಪ್ ಪಾಟೀಲ್ ಬಳಿ ನಮ್ಮವರು ಮಾತಾಡಿದ್ದಾರೆ. ಆತ ಹೇಳಿರುವ ಪ್ರಕಾರ ಕಿಡ್ನ್ಯಾಪ್ ಮಾಡಿದವರು ಆತನಿಗೆ ದರೋಡೆ ಬಗ್ಗೆ ಹೇಳಿದ್ದಾರೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ. ಚೋರ್ಲಾ ಘಾಟ್​ನಲ್ಲಿ ಹೊಸದಾಗಿ ಸಿಸಿಟಿವಿ ಅಳವಡಿಕೆ ಮಾಡುತ್ತೇವೆ ಎಂದು ಎಸ್​​ಪಿ ಕೆ.ರಾಮರಾಜನ್ ಹೇಳಿದ್ದಾರೆ.


ಚೋರ್ಲಾ ಘಾಟ್ ಆಯ್ಕೆ ಏಕೆ?
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಇರುವ ಚೋರ್ಲಾ ಘಾಟ್ ಪ್ರದೇಶದಲ್ಲಿ ನೆಟ್ವರ್ಕ್​ ಬರುವುದಿಲ್ಲ. ಗೋವಾದ ಕೇರಿಯಿಂದ ಬೆಳಗಾವಿಯ ಜಾಂಬೋಟಿವರೆಗೂ 4 ಗಂಟೆ ಸಂಪರ್ಕ ಕಡಿತಗೊಳ್ಳುತ್ತೆ. ಗೋವಾದಿಂದ ಚೋರ್ಲಾ ಘಾಟ್​​ಗೆ ಬರಲು 3 ಗಂಟೆ ಸಮಯ ಬೇಕು. ಚೋರ್ಲಾದಿಂದ ಮಹಾರಾಷ್ಟ್ರಕ್ಕೆ ಅರಣ್ಯ ಅಂಚಿನ ದಾರಿ ಕನೆಕ್ಟ್ ಆಗುತ್ತೆ. ಚೋರ್ಲಾದಲ್ಲಿ ಸಣ್ಣ ಪುಟ್ಟ ವಾಹನ ಹೋಗುವಷ್ಟು ಕಾಲುದಾರಿ ಇದೆ. ಕಂಟೇನರ್​ನಿಂದ ಮಿನಿ ಗೂಡ್ಸ್​​ಗೆ ಡಂಪ್ ಮಾಡಿ ಬಳಿಕ ಹಣ ಸಾಗಿಸಿದ್ರಾ, ಈ ಪ್ರದೇಶದಲ್ಲಿ ದರೋಡೆ ಮಾಡಿದರೆ ಯಾರಿಗೂ ಸಂಪರ್ಕ ಸಿಗೋದಿಲ್ಲ, ಹೀಗಾಗಿ ಈ ಎಲ್ಲಾ ವಿಚಾರಗಳಿಂದ ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.


6 ಆರೋಪಿಗಳು ಬಂಧನ:
400
ಕೋಟಿ ರೂ ದರೋಡೆ ಕೇಸ್​ಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಎಸ್​ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು