Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪ್ರತಿ ದಿನ ಹಾಲು ಉತ್ಪಾದಕರಿಗೆ 5 ಕೋಟಿ ಸಹಾಯಧನ ನೀಡಲಾಗುತ್ತಿದೆ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, ಸಹಕಾರಿ ರಂಗದ ಸಾಧಕರಿಗೆ 'ಸಹಕಾರ ರತ್ನ' ಪ್ರಶಸ್ತಿ ವಿತರಿಸಿ ಮಾತನಾಡಿದರು.

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು 25,000 ಕೋಟಿ ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು.

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ.

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 3 ರೂ. ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂ.ಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಹಾಯ ಧನ ಜಮೆ ಆಗುತ್ತಿದೆ.  ಇದಕ್ಕೆಲ್ಲಾ ಹಾಲು ಮಹಾ ಮಂಡಳ ತಾಯಿಬೇರು ಇದ್ದಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು