Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಅಮೆರಿಕ ಕನ್ನಡತಿ ಕಾವೇರಿ ಆರತಿಗೆ 5 ಲಕ್ಷ ಸಮರ್ಪಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ ವಿದೇಶಿ ಕನ್ನಡತಿಯಿಂದ ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ ಮಾಡಿ ಸಹಕಾರ ನೀಡಿದ್ದಾರೆ.

ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಶ್ರೀಮತಿ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ.

ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.

ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ "ಕಾವೇರಿ ಆರತಿ" ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ ಅನಿವಾಸಿ ಭಾರತೀಯ ಜ್ಯೋತಿ ವಿಕಾಸ್ ತಿಳಿಸಿದ್ದಾರೆ.

ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರೇ. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

"ಕಾವೇರಿ ಆರತಿ"ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅನಿವಾಸಿ ಭಾರತೀಯ ಜ್ಯೋತಿ ವಿಕಾಸ್ ಅಭಿಪಾಯಪಟ್ಟಿದ್ದಾರೆ.

ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ. ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಎಂದು ಜ್ಯೋತಿ ವಿಕಾಸ್, ಅನಿವಾಸಿ ಭಾರತೀಯರು, ಫೀನಿಕ್ಸ್.

ಶ್ರೀಮತಿ ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕರು ಹಾಗೂ ಗ್ಯಾರಂಟಿ ಯೋಜನೆಯ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ