Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭದ್ರಾ ಮೇಲ್ದಂಡೆ 5300 ಕೋಟಿ ಮುಗಿದ ಅಧ್ಯಾಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭದ್ರಾ ಮೇಲ್ದಂಡೆಗೆ ಕೇಂದ್ರ ಸರ್ಕಾರದ ಅನುದಾನ ಪಡೆಯುವುದು ದಿನದಿಂದ ದಿನಕ್ಕೆ ಕ್ಲಿಷ್ಟವಾಗುತ್ತಿದ್ದು ಇದೇ ಪರಿಸ್ಥಿತಿ ಮುಂದುವರಿದರೆ ಯೋಜನೆ ಪೂರ್ಣಗಳೊಳ್ಳಲು ಮತ್ತೊಂದು ದಶಕ ಸಮಯ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆತಂಕ ವ್ಯಕ್ತಪಡಿಸಿದೆ.


      ಇಲ್ಲಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕೇಂದ್ರ ಸರ್ಕಾರ 2022-23 ಸಾಲಿನ ಬಜೆಟ್ ನಲ್ಲಿ  ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ 5300 ಕೋಟಿ ರು ಅನುದಾನದ ಭರವಸೆ ನೀಡಿತ್ತು. ನಂತರದ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಯೋಜನೆ ಘೋಷಣೆ ಅಸಾಧ್ಯವೆಂದು ಹೇಳಿ ಪ್ರಧಾನ ಮಂತ್ರಿ ಕೃಷಿ ಸಂಚಾಯಿನಿ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ಒದಗಿಸುವುದಾಗಿ ಹೇಳಿತ್ತು. ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರಕದ ಕಾರಣ ಅನುದಾನ ಬಿಡುಗಡೆಯಾಗಿರಲಿಲ್ಲ.  ಅಚ್ಚರಿ ಎಂದರೆ ಇದುವರೆಗೂ ಕೃಷಿ ಸಂಚಾಯಿನಿ ಯೋಜನೆಯಡಿ ಅನುದಾನ ಪಡೆಯಲು ಪ್ರಸ್ತಾಪವೇ ಆಗಿಲ್ಲ, ಯೋಜನೆಗಳ ಪಟ್ಟಿಯಲ್ಲಿ ಭದ್ರಾ ಮೇಲ್ದಂಡೆ ಸೇರ್ಪಡೆಯಾಗಿಲ್ಲ ಎಂದು ಅವರು ತಿಳಿಸಿದರು.

   ಹಾಲಿ ನಡೆಯುತ್ತಿರುವ ಸಂಸತ್ ಅಧಿವೇಶದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಸುಧಾಕರ್ ಅವರು ಪ್ರಶ್ನೆಯೊಂದನ್ನು ಸಂಸತ್ ಮುಂದೆ ಇಟ್ಟು ಉತ್ತರ ಬಯಸಿದ್ದರು. ಕೃಷಿ ಸಂಚಾಯಿನಿ ಯೋಜನೆಯಡಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾದ ಯೋಜನೆಗಳು ಹಾಗೂ ಅದು ಮುಕ್ತಾಯವಾಗುತ್ತಿದೆಯೇ ಅಥವ ಮುಂದುವರಿಯುತ್ತದೆಯೇ ಎಂಬ ಪ್ರಶ್ನೆ ಕೇಳಿದ್ದರು.

   ಇದಕ್ಕೆ ಉತ್ತರ ನೀಡಿದ್ದ  ಕೇಂದ್ರ ಜಲಶಕ್ತಿ ಸಚಿವರು  2020 ರಿಂದ 2025 ರವರೆಗೆ ಕೃಷಿ ಸಂಚಾಯಿನಿ ಯೋಜನೆ ಜಾರಿಯಲ್ಲಿದ್ದು ಅದು ಮಾರ್ಚ್ ಗೆ ಮುಕ್ತಾಯವಾಗುತ್ತದೆ ಎಂದು ಹೇಳಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾದ ಯೋಜನೆಗಳ ತಿಳಿಸಿದ್ದರು. ಅದರಲ್ಲಿ  ಭದ್ರಾ  ಮೇಲ್ದಂಡೆ ಇರಲಿಲ್ಲ.  ಅಪ್ಪರ್ ತುಂಗಾ, ರಾಮೇಶ್ವರ, ಭೀಮ ಏತ ನೀರಾವರಿ, ಕಾರಂಜ  ಯೋಜನೆ ಹಾಗೂ  ನಾರಾಯಣಪುರ ಲೆಫ್ಟ್ ಬ್ಯಾಂಕ್ ಕಾಲುವೆ ಯೋಜನೆಗಳು ಮಾತ್ರ ಪ್ರಧಾನ ಮಂತ್ರಿ ಕೃಷಿ ಸಂಚಯಿನಿ ಯೋಜನೆ ಪಟ್ಟಿಯಲ್ಲಿದ್ದವು.

     ಪ್ರಧಾನ ಮಂತ್ರಿ ಕೃಷಿ ಸಂಚಯಿನಿ ಯೋಜನೆ 2026 ರಿಂದ 2031 ರವರೆಗೆ ಮತ್ತೊಂದು ಪಂಚವಾರ್ಷಿಕ ಯೋಜನೆಯ ಮುಂದೆ ಭದ್ರಾ ಮೇಲ್ದಂಡೆ ಯೋಜನೆ ಪ್ರಸ್ತಾಪವಾಗಿ ಅನುದಾನದ ಭರವಸೆ ನೀಡಬೇಕು. ಕೇಂದ್ರ ಜಲಶಕ್ತಿ ಸಚಿವಾಲಯದ ಅಧಿಕಾರಿಗಳ ಸೂಚನೆಯಂತೆ ಭದ್ರಾ ಮೇಲ್ದಂಡೆ ಯೋಜನೆಯನ್ನು 21,167 ಸಾವಿರ ಕೋಟಿ  ರುಪಾಯಿಗೆ  ಪರಿಷ್ಕರಣೆ ಮಾಡಿ ಮರು ಪ್ರಸ್ತಾವನೆ ಸಲ್ಲಿಸಲಾಗಿದ್ದು ಇದಿನ್ನು ಪರಿಶೀಲನೆ ಹಂತದಲ್ಲಿದೆ.

   ಕೃಷಿ ಸಂಚಾಯಿನಿ ಯೋಜನೆಯಡಿ ಅನುಮೋದನೆ ಪಡೆಯಬೇಕಾದರೆ ಮೊದಲು ಅಂದಾಜು ಪಟ್ಟಿ ಸಲ್ಲಿಕೆಯಾಗಬೇಕು, ಇದನ್ನು ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಬೇಕು. ಇದಾದ ತರುವಾಯ ಮತ್ತೊಂದು ಮರು ಪ್ರಸ್ತಾವನೆ ಜಲಶಕ್ತಿ ಸಚಿವಾಲಯದ ಮುಂದೆ ಹೋಗುತ್ತದೆ. ಬಳಿಕ ಅಲ್ಲಿಂದ ಒಪ್ಪಿಗೆ ಪಡೆದು ಸಾರ್ವಜನಿಕ ಬಂಡವಾಳ  ಹೂಡಿಗೆ  ಸಮಿತಿ ಒಪ್ಪಿಗೆ ಪಡೆಯಬೇಕು. ಅದು ಅಂಗೀಕಾರ ಮಾಡಿದ ನಂತರ ಕೇಂದ್ರ ಸಂಪುಟದ ಒಪ್ಪಿಗೆ ಪಡೆಯಬೇಕು. ಇಷ್ಟೆಲ್ಲ ಹಂತಗಳು ಮುಗಿದ ನಂತರವೇ ಹಣಕಾಸು ಇಲಾಖೆ ಮುಂದೆ ಹೋಗಿ ಅನುದಾನ ಬಿಡುಗಡೆಯಾಗುತ್ತದೆ.

     ಕಳೆದ ಬಾರಿ ಭದ್ರಾ ಮೇಲ್ದಂಡೆ ಯೋಜನೆ ಕಡತಗಳು ಎಲ್ಲ ಹಂತಗಳಲ್ಲಿ ಒಪ್ಪಿಗೆಯಾಗಿ ಅಂತಿಮವಾಗಿ ಕೇಂದ್ರ ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲಾಗಿತ್ತು. ಕೇಂದ್ರ ಸಂಪುಟ ಅನುಮೋದನೆ ನೀಡದ ಕಾರಣ ಅನುದಾನ ಬಿಡುಗಡೆಯಾಗಿರಲಿಲ್ಲ. ಈಗ ಪ್ರಧಾನ ಮಂತ್ರಿ ಕೃಷಿ ಸಂಚಾಯಿನಿ ಯೋಜನೆ ಹೊಸ ಪಂಚವಾರ್ಷಿಕ ಯೋಜನೆ ಏಪ್ರಿಲ್ ನಿಂದ ಆರಂಭವಾಗಲಿದ್ದು ಅದರ ಮುಂದೆ ಮರು ಪ್ರಸ್ತಾವನೆ ಹೋಗಿ ನಂತರ ಐದಾರು ಹಂತಗಳನ್ನು ದಾಟಬೇಕಿದೆ. ರಾಜ್ಯದ ಸಂಸದರು ಇಚ್ಚಾಶಕ್ತಿ ಪ್ರದರ್ಶಿಸಿದರೆ ಕನಿಷ್ಟ ಆರರಿಂದ 12 ತಿಂಗಳಲ್ಲಿ ಯೋಜನೆಗೆ ಒಪ್ಪಿಗೆ ದೊರಕಿಸಿಕೊಡಬಹುದಾಗಿದೆ. ಕಳೆದ ಐದು ವರ್ಷಗಳಲ್ಲಿ ಸಾಧ್ಯವಾಗದೇ ಇರುವುದು ಮುಂದಿನ ಒಂದು ವರ್ಷದಲ್ಲಿ ಸಾಧ್ಯವಾ ಎಂಬ ಪ್ರಶ್ನೆ ಎದುರಾಗುತ್ತದೆ.

     ಹಾಗಾಗಿ ಕಳೆದ ಐದು ವರ್ಷದಿಂದ ಕಡತಗಳ ಹಿಡಿದು ಕೇಂದ್ರ ಸರ್ಕಾರವ ಎಡ ತಾಕಿದ ರಾಜ್ಯದ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಶ್ರಮ ಗುಡ್ಡಕ್ಕೆ ಕಲ್ಲು ಹೊತ್ತಂತಾಗಿದೆ. ಸಂಸದರು ರಾಜಕೀಯ  ಇಚ್ಚಾ ಶಕ್ತಿ ಪ್ರದರ್ಶಿಸದ ಹೊರತು ಅನುದಾನ ಪಡೆಯುವುದು ಕಷ್ಟ ಸಾಧ್ಯ .

     ರಾಜ್ಯಸರ್ಕಾರವೂ ಅನುದಾನ ಬಿಡುಗಡೆ ಮಾಡುವಲ್ಲಿ ತೀರಾ ತಾರತಮ್ಯ ನೀತಿ ಅನುಸರಿಸುತ್ತಿದೆ. ಚಿತ್ರದು್ರ್ಗಶಾಖಾ ಕಾಲುವೆಯ ಅಲ್ಪ ಸ್ವಲ್ಪ ಕಾಮಗಾರಿ ಪೂರ್ಣಗೊಳಿಸಲು ಬೇಕಾಗಿರುವ 200 ಕೋಟಿ ಅನುದಾನ ಬಿಡುಗಡೆ ಮಾಡಲು ಮೀನ ಮೇಷ ಎಣಿಸುತ್ತಿದೆ. ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ರಾಜ್ಯದ ಈ ನಡೆ  ಜನವಿರೋಧಿಯಾಗಿದ್ದು ಕೇಂದ್ರದ ಅನುದಾನ ಕಾಯದೆ ತನ್ನ ಪಾಲಿನ ಹಣಕಾಸು  ಜವಾಬ್ದಾರಿಯ ಸಿಎಂ ಸಿದ್ದರಾಮಯ್ಯ ನಿರ್ವಹಣೆ ಮಾಡಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಆಗ್ರಹಿಸಿದರು.

   ಸಮಿತಿ ಪ್ರಧಾನ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸ್ವರಾಜ್ ಇಂಡಿಯಾದ ಮುಖಂಡ ಜೆ.ಯಾದವರೆಡ್ಡಿ, ರೈತ ಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಹಂಪಯ್ಯನಮಾಳಿಗೆ ಧನಂಜಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ,ಮಲ್ಲಾಪುರ ತಿಪ್ಪೇಸ್ವಾಮಿ, ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಇದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು