Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

7.11 ಕೋಟಿ ದರೋಡೆಕೋರರ ಬಂಧನ, 5 ಲಕ್ಷ ಬಹುಮಾನ ಘೋಷಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ ಕ್ಸೇವಿಯರ್ ಹಾಗೂ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 5.76 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣ ವರದಿಯಾದ 54 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಆರರಿಂದ 8 ಜನರು ಶಾಮೀಲಾಗಿರುವ ಸಾಧ್ಯತೆಯಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.


ಅವರು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿ,
ಕಳೆದ ಮೂರು ತಿಂಗಳಿಂದ ದರೋಡೆಗೆ ಸಂಚು ರೂಪಿಸಿದ್ದರು. ಆರೋಪಿಗಳು
ಕೃತ್ಯಕ್ಕೆ ಕಳೆದ 15 ದಿನಗಳಿಂದಲೂ ಸ್ಥಳ ಪರಿಶೀಲಿಸಿ ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಅಶೋಕ ಪಿಲ್ಲರ್ - ಜಯನಗರ - ಡೇರಿ ಸರ್ಕಲ್‌ ಮಾರ್ಗದಲ್ಲಿ ಬಂದು, ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿ ತಾವು ಆರ್‌ಬಿಐ ನಿಯಂತ್ರಣಾಧಿಕಾರಿಗಳೆಂದು ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು.


ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್‌ನತ್ತ ಚಲಾಯಿಸುವಂತೆ ಸೂಚಿಸಿದ್ದ ಎಂದು ಆಯುಕ್ತರು ವಿವರಿಸಿದರು.

ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಆರೋಪಿಗಳು ಮೊಬೈಲ್ ಕಿತ್ತುಕೊಂಡು, ಅವರನ್ನು ನಿಮ್ಹಾನ್ಸ್ ಬಳಿ ಕೆಳಗಿಳಿಸಿ ಕಾಲ್ಕಿತ್ತಿದ್ದರು. ಕೃತ್ಯ ನಡೆದ ನಂತರ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗುವಷ್ಟರಲ್ಲಿ ಒಂದೂವರೆ ತಾಸು ಕಳೆದುಹೋಗಿತ್ತು.


ನಂತರ ನಾವು ತನಿಖೆ ಕೈಗೊಂಡಾಗ ಆರೋಪಿಗಳು ಸಿಸಿಟಿವಿಗಳು ಇರದ ಸ್ಥಳಗಳನ್ನು ಬಳಸಿಕೊಂಡಿರುವುದು, ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡದಿರುವುದು ಹಾಗೂ ದರೋಡೆಯಾದ ಹಣದ ನೋಟುಗಳು ಸಹ ಸರಣಿ ನಂಬರ್‌ನಲ್ಲಿ ಇರದಿರುವುದು ತನಿಖೆಗೆ ಸಾಕಷ್ಟು ಸವಾಲಿನ ಸಂಗತಿಯಾಗಿತ್ತು‌ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದರು.

ಆದರೂ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿ ಬೆಂಗಳೂರಿನ ಗಡಿಭಾಗದ ಜಿಲ್ಲೆಗಳ ಎಸ್‌ಪಿಗಳು, ನೆರೆಯ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬೆಂಗಳೂರು ಪೊಲೀಸ್ ಇಲಾಖೆಯ ಇಬ್ಬರು ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದ ಸುಮಾರು 200 ಜನ ಅಧಿಕಾರಿ ಹಾಗೂ ಸಿಬ್ಬಂದಿಯನ್ನೊಳಗೊಂಡ 11 ತಂಡಗಳು ಕೇರಳ, ತಮಿಳುನಾಡು, ತೆಲಂಗಾಣಗಳಿಗೆ ತೆರಳಿ ಮೂವರು ಆರೋಪಿಗಳನ್ನು ಬಂಧಿಸಿ ಕರೆತಂದಿದ್ದರು ಎಂದು ಅವರು ತಿಳಿಸಿದರು.


ಬಹುಮಾನ ಘೋಷಣೆ:
ಬೆಂಗಳೂರು ಹೊರವಲಯದಲ್ಲಿ ಹಾಗೂ ವಿವಿಧೆಡೆ ಬಚ್ಚಿಟ್ಟಿದ್ದ
5.76 ಕೋಟಿ ರೂಪಾಯಿ ಹಣವನ್ನು ಸದ್ಯಕ್ಕೆ ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ‌. ತನಿಖಾ ತಂಡಕ್ಕೆ 5 ಲಕ್ಷ ರೂ. ನಗದು ಬಹುಮಾನ ಘೋಷಿಸಿಸಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು