Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

7 ಲಕ್ಷ ಸ್ವಂತ ಮನೆ ಹೊಂದುವ ಕನಸು ನನಸು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು  ನಿರ್ಮಿಸುವ ಗುರಿ ನೀಡಿರುವ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಹಿಂದೆ ನೀಡಲಾಗಿದ್ದ 2,26,175 ಮನೆಗಳ ನಿರ್ಮಾಣದ ಗುರಿಯ ಜೊತೆಗೆ ಹೆಚ್ಚುವರಿ 4,76,556 ಮನೆಗಳನ್ನು ನಿರ್ಮಿಸುವ ಉದ್ದೇಶವನ್ನು ಸಾಧಿಸಲು ಸರ್ವರಿಗೂ ಸೂರು ಕಲ್ಪಿಸುವ ಮಹತ್ವದ ಗುರಿ ತಲುಪುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನಿರ್ಧಾರದಿಂದ ಗ್ರಾಮೀಣ ಕುಟುಂಬಗಳಿಗೆ ಅಗತ್ಯ ಸೌಕರ್ಯಗಳೊಂದಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಂಡು ನಾಡಿನ ಬಡವರ ಸ್ವಂತ ಸೂರು ಹೊಂದುವ ಕನಸುಗಳನ್ನು ಈಡೇರಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಲಿ. ಸದರಿ ಯೋಜನೆಯು ನಾಡಿನ 7 ಲಕ್ಷ ಬಡ ಕುಟುಂಬಗಳಿಗೆ ಸದುಪಯೋಗವಾಗಲಿದ್ದು ಸುಸಜ್ಜಿತ ಮನೆ ಹಾಗೂ ಮೂಲಸೌಕರ್ಯಗಳೊಂದಿಗೆ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು