Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಕರ್ನಾಟಕದಲ್ಲಿ 80–100 ಮಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ 80-100 ದಶಲಕ್ಷ US ಡಾಲರ್ ಹೂಡಿಕೆ ದೃಢಪಡಿಸಿದ ಹೊಸೋಡಾ ಹೋಲ್ಡಿಂಗ್ಸ್! ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.


ನಮ್ಮ ಜಪಾನ್ ಪ್ರವಾಸ ಯಶಸ್ವಿಯಾಗಿ ಮುಂದುವರೆದಿದ್ದು ಈ ದಿನ ಹೊಸೋಡಾ ಹೋಲ್ಡಿಂಗ್ಸ್ ನ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಸಫಲವಾಗಿದೆ. ಅವರು ಟಾಂಗ್ ಟಾರ್ ಎನರ್ಜಿ ಸೊಲ್ಯೂಶನ್ಸ್ - TTES ಜೊತೆಗೆ, ಕರ್ನಾಟಕದಲ್ಲಿ 80100 ಮಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಾಗಿ ದೃಢಪಡಿಸಿದರು ಎಂದು ಪಾಟೀಲ್ ತಿಳಿಸಿದರು.


ಈ ಯೋಜನೆಯಿಂದ ಸೌರ ಸೆಲ್  ಉತ್ಪಾದನಾ ಘಟಕ ಸ್ಥಾಪನೆಯಾಗಲಿದ್ದು, ಸುಮಾರು 500 ನೇರ ಉದ್ಯೋಗಗಳು ಸೃಷ್ಟಿಯಾಗುತ್ತವೆ ಹಾಗೂ ನಮ್ಮ ಶುದ್ಧ ಇಂಧನ ಪರಿಸರ ಮತ್ತಷ್ಟು ಬಲಗೊಳ್ಳಲಿದೆ.

ಘಟಕ ಸ್ಥಾಪನೆಗೆ ಬೇಕಾದ ಭೂಮಿ, ಅವಶ್ಯಕ ಸೌಲಭ್ಯಗಳು ಮತ್ತು ಸಿಂಗಲ್-ವಿಂಡೋ ಅನುಮತಿಗಳವರೆಗೂ ಪ್ರತಿಯೊಂದು ಹಂತದಲ್ಲೂ ಸಹಕಾರ ನೀಡುವುದಾಗಿ ಹೊಸೋಡಾಗೆ ಭರವಸೆ ನೀಡಿದ್ದೇವೆ.

ನವೀಕರಿಸಬಹುದಾದ ಇಂಧನ ವೃದ್ಧಿಯನ್ನು ಮುನ್ನಡೆಸುವಲ್ಲಿ ಕರ್ನಾಟಕದ ಬದ್ಧತೆಯನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

 

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ