Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸರ್ವಾಧಿಕಾರಿ ಆಡಳಿತ V/S ಪ್ರಜಾಪ್ರಭುತ್ವದ ನಡುವಿನ ಸಮರ

ಸರ್ವಾಧಿಕಾರಿ ಆಡಳಿತ V/S ಪ್ರಜಾಪ್ರಭುತ್ವದ ನಡುವಿನ ಸಮರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ, ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ.

ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ರೀತಿಯಲ್ಲಿ ಚಿತ್ತಾಪುರದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದ್ದಾರೆ. ಆರ್ ಎಸ್ಎಸ್ ಪಥ ಸಂಚಲನ ಹಾಗೂ ಕಾರ್ಯಕ್ರಮದ ಅನುಮತಿಗೆ ವಿಧಿಸಿರುವ ಷರತ್ತುಗಳನ್ನು ರಾಜ್ಯಕ್ಕೆ ಅನ್ವಯಿಸಿ ಬಿಟ್ಟರೆ ಕರ್ನಾಟಕದ ಯಾವುದೇ ಮೂಲೆಗಳಲ್ಲೂ ಯಾವುದೇ ಸಾಂಸ್ಕೃತಿಕ ಹಾಗೂ ರಾಷ್ಟ್ರಭಕ್ತಿಯ ಕಾರ್ಯಕ್ರಮಗಳನ್ನು ನಡೆಸಲು ಆಸ್ಪದವೇ ಇಲ್ಲದಂಥ ಪರಿಸ್ಥಿತಿ ನಿರ್ಮಾಣವಾಗಲಿದೆ.

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ಆಡಳಿತ ಹೇರಲು ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸುತ್ತಿದೆ ಅದಕ್ಕೆ ಚಿತ್ತಾಪುರವನ್ನು ಪ್ರಯೋಗಾಲಯ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದರು.

ಚಿತ್ತಾಪುರದಲ್ಲಿ ಸದ್ಯ ಆರಂಭವಾಗಿರುವುದು ಸರ್ವಾಧಿಕಾರಿ ಆಡಳಿತ V/S ಪ್ರಜಾಪ್ರಭುತ್ವದ ನಡುವಿನ ಸಮರಇದನ್ನು ಸವಾಲಾಗಿ ಸ್ವೀಕರಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಾರ್ಟಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ವಿಜಯೇಂದ್ರ ತಿಳಿಸಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು