Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಆರೋಗ್ಯ ತುರ್ತು ಪರಿಸ್ಥಿತಿ ಹೇರಿದ ರೋಗ ಪೀಡಿತ ಕಾಂಗ್ರೆಸ್ ಸರ್ಕಾರ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ "ಆರೋಗ್ಯ ತುರ್ತುಪರಿಸ್ಥಿತಿ" ಹೇರಿರುವ ರೋಗಪೀಡಿತ ಕಾಂಗ್ರೆಸ್ ಸರ್ಕಾರ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ.


ಈ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ ಸರ್ಕಾರ ರೋಗಪೀಡಿತವಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಾಲ್, ಐಬುಪ್ರೊಫೇನ್ ಮತ್ತು ಐವಿ ದ್ರವಗಳಂತಹ ಮೂಲಭೂತ ಔಷಧಿಗಳನ್ನು ಕೂಡ ರೋಗಿಗಳಿಗೆ ನೀಡಲಾಗದಷ್ಟು, ಸುಮಾರು 496 ಅಗತ್ಯ ಔಷಧಿಗಳ ತೀವ್ರ ಕೊರತೆಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ರೋಗಿಗಳಿಗೆ ನೀಡಲು ಗ್ಲುಕೋಸ್ ಕೂಡ ಇಲ್ಲದಂತಹ "ಆರೋಗ್ಯ ತುರ್ತುಪರಿಸ್ಥಿತಿ" ಇದ್ದರೂ, ಕುರ್ಚಿ ಕಾಳಗ, ವಿದೇಶ ಪ್ರವಾಸ, ನಿಗಮ ಮಂಡಳಿಗಳ ಅಧ್ಯಕ್ಷರುಗಳಿಗೆ ಸಚಿವ ಸ್ಥಾನಮಾನಗಳಂತಹ ಸ್ವಾರ್ಥ ರಾಜಕೀಯದಲ್ಲೇ ಸರ್ಕಾರ ನಿರತವಾಗಿದೆ. ಬಡವರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೈಕೋರ್ಟ್ ಛೀಮಾರಿ ಹಾಕಿದ್ದರೂ ತಿದ್ದಿಕೊಳ್ಳದ ನಿಮ್ಮ ಅಸಲಿಯತ್ತು ಬಹಳ ಗಂಭೀರವಾಗಿ ಬಯಲಾಗಿದೆ.

ವಿಪರ್ಯಾಸವೆಂದರೆ, ಸ್ವತಃ ಔಷಧಿ ಪೂರೈಸುವಲ್ಲಿ ವಿಫಲವಾಗಿರುವ ಈ ಸರ್ಕಾರ, ಕೇವಲ ದ್ವೇಷ ರಾಜಕಾರಣಕ್ಕಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪ್ರಿಯ ಜನೌಷಧಿ ಕೇಂದ್ರಗಳನ್ನೇ ಮುಚ್ಚಲು ಸಂಚು ರೂಪಿಸುತ್ತಿತ್ತು. ಆದರೆ ಈಗ ವಿಧಿಯಿಲ್ಲದೇ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ತಮ್ಮ ಪೂರೈಕೆ ಅಂತರವನ್ನು ಕಡಿಮೆ ಮಾಡಲು, ಅದೇ ಪ್ರಧಾನಮಂತ್ರಿ ಜನೌಷಧಿ ಯೋಜನೆ ಅಡಿ ಔಷಧಿಗಳನ್ನು ಖರೀದಿಸಲು ಮಧ್ಯಂತರ ವ್ಯವಸ್ಥೆಯ ಪ್ರಸ್ತಾವ ಸಲ್ಲಿಸಿದೆ. ತಕ್ಷಣವೇ ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳನ್ನು ಪೂರೈಸಿ ಮತ್ತು ಜನೌಷಧಿ ಕೇಂದ್ರಗಳ ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವುದನ್ನು ನಿಲ್ಲಿಸಿ ಎಂದು ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ