Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ವ್ಯಾಪಾರದ ಸ್ಪರ್ಧಾತ್ಮಕತೆ ಪರಿಣತರ ತೀರ್ಮಾನದಂತೆ ನಟಿ ತಮನ್ನಾ ಭಾಟಿಯಾ ಆಯ್ಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಚನ ಪರಂಪರೆಯಿಂದ ಬಂದಿರುವ ನನಗೆ ಕನ್ನಡ
, ಕನ್ನಡಿಗ, ಕರ್ನಾಟಕದ ಮೇಲೆ ಅಪಾರ ಗೌರವ ಮತ್ತು ಎಲ್ಲರಿಗಿಂತ ಹೆಚ್ಚಿನ ಬದ್ಧತೆ ಇದೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ರಾಜ್ಯದ ಅಸ್ಮಿತೆ ಮತ್ತು ಹೆಮ್ಮೆಯ ಸಂಕೇತ. ಇಲ್ಲಿಯ ಕಲಾವಿದರ ಬಗ್ಗೆ ಅಭಿಮಾನವೂ ಇದೆ.

ಆದರೆ, ವ್ಯಾಪಾರದ ಪ್ರಶ್ನೆ ಬಂದಾಗ ಸ್ಪರ್ಧಾತ್ಮಕತೆಯನ್ನು ನೋಡಬೇಕು. ಹೀಗಾಗಿ ಪರಿಣತರ ತಂಡದ ತೀರ್ಮಾನದಂತೆ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ಸ್ಪಷ್ಟಪಡಿಸಿದ್ದಾರೆ.

ತಮನ್ನಾ ಭಾಟಿಯಾ ಅವರ ನೇಮಕಕ್ಕೆ ಕೆಲವರು ಕನ್ನಡದ ಹೆಸರು ಹೇಳಿಕೊಂಡು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಶುಕ್ರವಾರ ಈ ಕುರಿತಾಗಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಇದನ್ನು ನಕಾರಾತ್ಮಕವಾಗಿ ನೋಡಬಾರದು, ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್ಡಿಎಲ್​ನಲ್ಲಿ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಾಗಿದೆ.

ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ. ಜತೆಗೆ ಎಫ್ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇಕಡ 15ರಷ್ಟಿದೆ. ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ 9), ಐಟಿಸಿ (ಶೇಕಡ 8), ವಿಪ್ರೋ (ಶೇಕಡ 7) ಮುಂತಾದ ಉದ್ದಿಮೆಗಳನ್ನೂ ಕೆಎಸ್ಡಿಎಲ್ ಹಿಂದಿಕ್ಕಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ(ಕೆಎಸ್ಡಿಎಲ್) ವಹಿವಾಟನ್ನು ಮುಂದಿನ ಮೂರು ವರ್ಷಗಳಲ್ಲಿ 5,000 ಕೋಟಿ ರೂ.ಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದು ಎಂಬಿ ಪಾಟೀಲ್ ತಿಳಿಸಿದ್ದಾರೆ.

ಆರಂಭದಲ್ಲಿ ನಾವು ಕನ್ನಡದವರೇ ಆದ ದೀಪಿಕಾ ಪಡುಕೋಣೆ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದೆವು. ಜೊತೆಗೆ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಕೇಳಲಾಗಿದೆ. ದೀಪಿಕಾ ಅವರು ಅವರದೇ ಉತ್ಪನ್ನಗಳ ಪ್ರಚಾರದಲ್ಲಿ ಇದ್ದಾರೆ. ಹೀಗಾಗಿ ಬರಲಿಲ್ಲ. ಉಳಿದವರು ಬೇರೆ ಬೇರೆ ಸೌಂದರ್ಯ ವರ್ಧಕಗಳು, ಕ್ರೀಮ್​​ಗಳು ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಳ್ಳುವ ತೀರ್ಮಾನ ಮಾಡಲಾಯಿತು. ಮುಂದಿನ ಎರಡು ವರ್ಷ ಅವರು ಬಿಡುವಿಲ್ಲ ಎಂದು ಪಾಟೀಲ್ ತಿಳಿಸಿದರು.

ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿರುವ ತಮನ್ನಾ ಭಾಟಿಯಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೆಎಸ್ಡಿಎಲ್ ಮೂಲಕ ಇತ್ತೀಚೆಗೆ
21 ಹೊಸ ಉತ್ಪನ್ನ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ನಾವು ಪರ್ಫ್ಯೂಮ್​ ಕ್ಷೇತ್ರಕ್ಕೂ ಕಾಲಿಡುತ್ತಿದ್ದೇವೆ. ಇದಕ್ಕಾಗಿ ನಮ್ಮ ಅಧಿಕಾರಿಗಳನ್ನು ಉತ್ತರ ಪ್ರದೇಶದ ಕನೌಜ್​ಗೂ ಕಳಿಸಿಕೊಡಲಾಗಿತ್ತು. ವ್ಯಾಪಾರದ ಪ್ರಶ್ನೆ ಬಂದಾಗ ನಾವು ಅದಕ್ಕೆ ತಕ್ಕ ಕಾರ್ಯತಂತ್ರವನ್ನೇ ರೂಪಿಸಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.

ಬ್ರ್ಯಾಂಡ್ ಅಂಬಾಸಿಡರ್ ನೇಮಕವನ್ನು ತಪ್ಪಾಗಿ ಭಾವಿಸಬಾರದು. ನಾವು ಅಧಿಕಾರಕ್ಕೆ ಬಂದ ಮೇಲೆ, ಕೆಎಸ್ಡಿಎಲ್ ವಹಿವಾಟು 1,700 ಕೋಟಿ ರೂ.ಗೂ ಹೆಚ್ಚಾಗಿದೆ. ಇದರ ಪೈಕಿ ರಾಜ್ಯದಲ್ಲಿ ನಡೆದಿರುವ ವಹಿವಾಟಿನ ಮೊತ್ತ 320 ಕೋಟಿ ರೂ. ಆಸುಪಾಸಿನಲ್ಲಿದೆಯಷ್ಟೆ ಎಂದು ತಿಳಿಸಿದ್ದಾರೆ.

ಎಂಎಸ್ಐಎಲ್ ಸಂಸ್ಥೆಗೂ ಕೆಎಸ್ಡಿಎಲ್ ತರಹದಲ್ಲೇ ನಾವು ಹೊಸ ರೂಪ ನೀಡುತ್ತಿದ್ದು, ಸದ್ಯದಲ್ಲೇ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟಿನ ಗುರಿಯೊಂದಿಗೆ ಚಿಟ್ ಫಂಡ್ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿರುವ ಎಂಜಿಎಫ್ ಅನ್ನು ಕೂಡ ಉಳಿಸಿಕೊಳ್ಳಬೇಕಾಗಿದೆ. ನಾವು ಅಖಿಲ ಭಾರತ ಮಟ್ಟವನ್ನು ಮೀರಿ ಜಾಗತಿಕ ಮಟ್ಟದಲ್ಲಿ ಯೋಚಿಸಬೇಕಾಗಿದೆ. ಕೆಎಸ್ಡಿಎಲ್ ಅನ್ನು ಕೇವಲ ಭಾರತವಲ್ಲ, ಅಂತಾರಾಷ್ಟ್ರೀಯ ಬ್ರ್ಯಾಂಡ್ ಆಗಿಸಬೇಕೆನ್ನುವುದು ನಮ್ಮ ಮಹತ್ವದ ಗುರಿ ಎಂದು ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ