Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಬಸವಾದಿ ಶರಣರ ವೈಭವ ರಥಯಾತ್ರೆಗೆ ಎಡಿಸಿ ಕುಮಾರಸ್ವಾಮಿ ಚಾಲನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ  ಶರಣರ ವೈಭವ ರಥಯಾತ್ರೆಗೆ ಭಾನುವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದಲ್ಲಿ ರಥಯಾತ್ರೆಯನ್ನು  ವಿವಿಧ ಜಾನಪದ ಕಲಾಮೇಳಗಳೊಂದಿಗೆ ಸ್ವಾಗತಿಸಿ, ಜಿಲ್ಲಾಡಳಿತದ ವತಿಯಿಂದ ಬಸವಾದಿ ಶರಣರಿಗೆ ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಲಾಯಿತು.  
ಇದೇ .29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಎರಡು  ದಿನಗಳ ಕಾಲ ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣ ವೈಭವಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ತುಮಕೂರಿನಿಂದ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯು ಶನಿವಾರ ರಾತ್ರಿ ಚಿತ್ರದುರ್ಗ ನಗರಲ್ಲಿ ವಾಸ್ತವ್ಯ ಮಾಡಿತು. ನಂತರ ಭಾನುವಾರ ದಾವಣಗೆರೆ ಜಿಲ್ಲೆಗೆ ರಥಯಾತ್ರೆಯು ತೆರಳಿತು.
ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣ ಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.
ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಮುಖಂಡರಾದ ಮಹಡಿ ಶಿವಮೂರ್ತಿ, ರೀನಾ ವೀರಭದ್ರಪ್ಪ, ಕೆಇಬಿ ಷಣ್ಮುಖಪ್ಪ, ಕೆ.ಸಿ.ನಾಗರಾಜು, ಚಿನ್ಮಾಯಿನಂದ, ಶಶಿಧರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು