Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಿರಿಯ ನಾಗರೀಕರ ಜೀವನಾನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ- ಎಂ.ಕಾರ್ತಿಕ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರು, ವಿದ್ಯಾರ್ಥಿಗಳು, ಯುವಕರು ಹಿರಿಯ ನಾಗರೀಕರ ಉತ್ತಮ ಜೀವನ ಅನುಭವದ ಪಾಠಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಂಡಾಗ ಮಾತ್ರ ಅದ್ಬುತವಾದ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಉಪ ವಿಭಾಗಾಧಿಕಾರಿ ಎಂ ಕಾರ್ತಿಕ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ  ಸಹಯೋಗದಲ್ಲಿ ಮಂಗಳವಾರ  ನಗರದ .ರಾ.ಸು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ಜೀವಿಗಳಿಗೆ ಆರೋಗ್ಯ ಮತ್ತು ಬೆಂಬಲ ಸುವ್ಯವಸ್ಥೆಗಳನ್ನು ಸದೃಢವಾಗಿ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹಿರಿಯ ನಾಗರೀಕರಿಗೆ ತಮ್ಮ ಮಕ್ಕಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಹಾಗೂ ಮಾನಸಿಕವಾಗಿ, ದೈಹಿಕವಾಗಿ ತೊಂದರೆಗಳು ನೀಡಿದಲ್ಲಿ ಆತಂಕ ಬೇಡ.  

ಉಪವಿಭಾಗಾಧಿಕಾರಿಗಳ ಹಂತದಲ್ಲಿ ಹಿರಿಯ ನಾಗರೀಕರ ಕಾಯ್ದೆಯಡಿ ದಾವೆ ಹೂಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಸಮಾಜದಲ್ಲಿ ಪ್ರಸ್ತುತ ಇಷ್ಟೆಲ್ಲಾ ಕಾನೂನು ಸುವ್ಯವಸ್ಥೆ ಇದ್ದರೂ ಸಹ, ತಮ್ಮ ಮಕ್ಕಳ ಲಾಲನೆ- ಪಾಲನೆ ಮಾಡಿ ಸರ್ವಸ್ವವನ್ನು ಧಾರೆ ಎರೆದ ಪೋಷಕರ ಬಗ್ಗೆ ಕಾಳಜಿ ವಹಿಸದೇ ಇರುವುದು ಬೇಸರದ ಸಂಗತಿ ಎಂದು ಮರುಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ರಂಗಪ್ಪರೆಡ್ಡಿ ಮಾತನಾಡಿ, ಹಿರಿಯ ನಾಗರೀಕರಿಗಾಗಿ ಸರ್ಕಾರವು ಮತ್ತಷ್ಟು ವಿವಿಧ ರೀತಿಯ ಯೋಜನೆಗಳನ್ನು ರೂಪಿಸಬೇಕು. ಯುವ ಪೀಳಿಗೆ ಹಿರಿಯರ ಬಗ್ಗೆ ಗೌರವಯುತವಾದ ಮನೋಭಾವ ಹೊಂದಿರಬೇಕು. ಸರ್ಕಾರಿ ಕಚೇರಿಗಳಲ್ಲಿ ಹಿರಿಯ ನಾಗರೀಕರನ್ನು ಆತ್ಮೀಯತೆಯಿಂದ ಕಾಣಬೇಕು ಎಂದು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಹಿರಿಯ ನಾಗರೀಕರು ತಮ್ಮ ಕುಟುಂಬ, ಸಮಾಜ, ಸಮುದಾಯಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿ 1991 ರಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಆಚರಿಸಲಾಗುತ್ತಿದೆ.

ಹಿರಿಯ ನಾಗರೀಕರಿಗೆ ವಯಸ್ಸಾದಂತೆ ದೈಹಿಕ, ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ತಮ್ಮ ಜೀವನಕ್ಕೆ ಧಕ್ಕೆಯಾಗದಂತೆ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣದ ಜೊತೆಗೆ ಉತ್ತಮವಾದ ಸಂಸ್ಕಾರವನ್ನು ರೂಢಿಸಿದರೆ ಮುಂದಿನ ಜೀವನ ಸುಖಕರವಾಗುವುದು ಎಂದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕಗಳನ್ನು ನೀಡಿ ಗೌರವಿಸಲಾಯಿತು.

ವಿಕಲಚೇನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಂದಿಸಿದರು. ಮೂರ್ತಿ ಹಾಗೂ ತಂಡದವರು ಗೀತ ಗಾಯನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಜಿಲ್ಲಾ ಪಂಚಾಯತ್ ಸಹ ಕಾರ್ಯದರ್ಶಿ ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ವಿಜಯ್ ಕುಮಾರ್, ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಸುಧಾ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು