ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿಗೆ ಅಂಧ ಮಕ್ಕಳಿಗೆ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಿಸಲು ವಿಶೇಷ ಡಿ.ಎಡ್ ತರಬೇತಿಗೆ ದಾಖಲಾಗಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ತರಬೇತಿಯು ಅವಧಿ 02 ವರ್ಷಗಳಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ಶೇ.50 ಅಂಕಗಳೊಂದಿಗೆ ಉತೀರ್ಣರಾದ ಆಸಕ್ತ ಅಭ್ಯರ್ಥಿಗಳು ಇದೇ ಅಕ್ಟೋಬರ್ 28ರೊಳಗಾಗಿ ಅರ್ಜಿ ಸಲ್ಲಿಸಬಹುದು.
ವೆಬ್‍ಸೈಟ್ https://nber-rehabcouncil.gov.in ನಲ್ಲಿ ಅಥವಾ ತರಬೇತಿ ಕೇಂದ್ರಕ್ಕೆ ಖುದ್ದಾಗಿ ಬಂದು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಯೋಜಕರು ಆಶಾ ವಿ, ಹಿರೆಮಠ್-9113561620 ಮತ್ತು ಮಂಜುನಾಥ-9686762378 ಕಛೇರಿ ದೂರವಾಣಿ ಸಂಖ್ಯೆ: 0821-2491600 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.




