Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೈ ಬಿಟ್ಟು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ ಸವಾರನ ವಿರುದ್ಧ ಎಫ್‌ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ತಲೆಗೆ ಹೆಲ್ಮೆಟ್ ಧರಿಸದೇ ಹಾಗೂ ಬೈಕ್ ಹ್ಯಾಂಡಲ್‌ನಿಂದ ಎರಡೂ ಕೈಗಳನ್ನು ತೆಗೆದು ಸಾರ್ವಜನಿಕರಿಗೆ ಪ್ರಾಣಾಪಾಯ ಉಂಟಾಗುವಂತೆ ಅಪಾಯಕಾರಿ ರೀತಿಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಸವಾರನ ವಿರುದ್ಧ ಚಿತ್ರದುರ್ಗ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

​ಘಟನೆಯ ವಿವರ: ಚಿತ್ರದುರ್ಗ ನಗರ ಸಂಚಾರ ಪೊಲೀಸ್ ಠಾಣೆಯ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಿಬ್ಬಂದಿಯಾದ ಸಿಪಿಸಿ-2501 ಮಧು ಎಂ. ಅವರು ದಿನಾಂಕ 27.09.2026 ರಂದು ಕರ್ತವ್ಯ ನಿರ್ವಹಿಸುತ್ತಿದ್ದಾಗ, _beast.xo ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದ್ದ ವಿಡಿಯೋ ಒಂದನ್ನು ಗಮನಿಸಿದ್ದಾರೆ. 

Advertisement

​ದಿನಾಂಕ 25.09.2026 ರಂದು ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಡೆಯಿಂದ ಜೆ.ಎಂ.ಐ.ಟಿ ಸರ್ಕಲ್ ಕಡೆಗೆ ಹೋಗುವ ಬಿ.ಡಿ ರಸ್ತೆಯಲ್ಲಿ, KA-16-HC-4095 ನೋಂದಣಿ ಸಂಖ್ಯೆಯ ಬೈಕ್ ಸವಾರನು ತಲೆಗೆ ಹೆಲ್ಮೆಟ್ ಧರಿಸದೇ, ಬೈಕ್‌ನ ಹ್ಯಾಂಡಲ್‌ನಿಂದ ಎರಡೂ ಕೈಗಳನ್ನು ಬಿಟ್ಟು ನಿರ್ಲಕ್ಷ್ಯ ಹಾಗೂ ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. 

​ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಆದ ಬೆನ್ನಲ್ಲೇ, ಸಾರ್ವಜನಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ರೀತಿಯಲ್ಲಿ ಚಾಲನೆ ಮಾಡಿದ ಬೈಕ್ ಸವಾರನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಸಿಬ್ಬಂದಿ ಮಧು ಎಂ. ಅವರು ದೂರು ನೀಡಿದ್ದಾರೆ. 

​ಈ ದೂರಿನ ಅನ್ವಯ, ಭಾರತೀಯ ನ್ಯಾಯ ಸಂಹಿತೆ 2023 ರ ಕಲಂ 281 ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ 1988 ರ ಕಲಂ 184 ರ ಅಡಿಯಲ್ಲಿ (ಅಪರಾಧ ಸಂಖ್ಯೆ: 93/2026) ಪ್ರಕರಣ ದಾಖಲಿಸಿಕೊಂಡು, ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ