E-PAPER
23 Nov 2026, 10:03:14 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಾಲು ಉತ್ಪಾದಕ ರೈತರಿಗೆ ಮತ್ತೊಂದು ರೂಪಾಯಿ ಪ್ರೋತ್ಸಾಹ ಧನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಲು ಉತ್ಪಾದಕ ರೈತರಿಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ.
ಈಗಾಗಲೇ ಸರ್ಕಾರದಿಂದ
5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಬಮೂಲ್​ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವ ರೈತರಿಗೆ ಇದು ಲಭ್ಯವಾಗಲಿದೆ.

ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್:
ಹಾಲು ಉತ್ಪಾದಕ ರೈತರಿಗೆ ಬಮೂಲ್ ವತಿಯಿಂದ 1 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವೂ 5 ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ರೈತರಿಂದ 59,39,78,492 ಲೀಟರ್​ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ತಿಳಿಸಿದ್ದಾರೆ.


ಕಾರ್ಮಿಕರಿಗೆ 6 ಕೋಟಿ ಡಿಎ ಕೊಡಬೇಕು. 60 ಕೋಟಿ ರೂ ಲಾಭ ಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5 ಸಾವಿರ ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಅಧ್ಯಕ್ಷ ಡಿ.ಕೆ.ಸುರೇಶ್​ ಹೇಳಿದ್ದಾರೆ.

ಸೋರಿಕೆ ತಡೆ-
ಮಾರುಕಟ್ಟೆಯಲ್ಲಿ ಸೋರಿಕೆ ಆಗುತ್ತಿದ್ದ ಹಾಲನ್ನು ತಡೆದಿದ್ದೇವೆ. ತುಪ್ಪದ ಬೆಲೆ ಜಾಸ್ತಿ ಮಾಡಿದ್ದೇವೆ. ಚೀಸ್ ಜಾಸ್ತಿ ಮಾರಾಟವಾಗುತ್ತಿದೆ. ಡೆಲ್ಲಿ ಮದರ್ ಡೈರಿಗೆ
2 ಲಕ್ಷ ಕೊಡುತ್ತಿದ್ದೇವೆ. ದುಂದು ವೆಚ್ಚ ಕಡಿಮೆ ಮಾಡಿದ್ದೇವೆ. ಸಿಬ್ಬಂದಿ ಮತ್ತು ಮಾರುಕಟ್ಟೆ ಸುಧಾರಣೆ ಮಾಡಲಾಗಿದ್ದು, ಈ ಎಲ್ಲಾ ಕೆಲವು ಕಾರಣಗಳಿಂದ ಲಾಭ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಕ್ಕೆ ಮನವಿ:
ಕ್ಷೀರ ಭಾಗ್ಯಕ್ಕೆ 75 ಸಾವಿರ ಲೀಟರ್ ಪೌಡರ್ ಆಗಿ ಕನ್ವರ್ಟ್ ಮಾಡಿ ಕೊಡುತ್ತಿದ್ದೇವೆ. ರಾಗಿ ಮಾಲ್ಟ್ ಜೊತೆ ಹಾಲು ಮಿಕ್ಸ್ ಮಾಡಿ ಕೂಡ ನಾವೂ ಕೊಡಲು ಸಿದ್ಧ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್ ಮಾಹಿತಿ ನೀಡಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!