E-PAPER
24 Nov 2026, 10:44:12 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಡಿಪ್ಲೋಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೋಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು) ದಿನಾಂಕ: 06-06-2025 ರಂದು ಅಭ್ಯರ್ಥಿಗಳ ಪಯಸ್ಸು 19 ವರ್ಷಗಳನ್ನು ಮೀರಿರದಾರದು, ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ(ಕೃಷಿ) ಪ್ರವೇಶಾಸಿಗೆ ಮೀಸಲಿಡಲಾಗಿದೆ.

ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ www.nahs.edu.in  ನಲ್ಲಿ ದಿನಾಂಕ: 06-05-2025 ರಿಂದ 06-06-2025 ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್‍ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 06-06-2025 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕೆ ಅವರಣ- 577, 412/ಇಲ್ಲಿಗೆ ಕಳುಹಿಸಿಕೊಡಬೇಕು, ದಿನಾಂಕ: 06-06-2025 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ (Nationalized Bank)  ಡಿ.ಡಿ.ಯನ್ನು Comptroller, KSNUAHS, Shivamogga - 577 412  ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ  ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಜೂನ್ 06ರ ಸಂಜೆ 4 ಗಂಟೆಯೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಜೂನ್ 06ರ ನಂತರ  ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‍ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು