Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ವಿಷಯ ವ್ಯಾಸಂಗ ಮಾಡಿರುವ ಪದವಿ, ಸ್ನಾತಕೋತ್ತರ ಪದವಿಧರರಿಗೆ ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಗಾಗಿ ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು.


ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ. (ಹದಿನೈದು ಸಾವಿರ ರೂಪಾಯಿಗಳು ಮಾತ್ರ) ಗಳ ಶಿಷ್ಯವೇತನ ನೀಡಲಾಗುವುದು. ಅವಧಿ ಈ ತರಬೇತಿಯು 2026ರ ಕ್ಯಾಲೆಂಡರ್ ಅವಧಿಯ ಜನವರಿ-2026ರ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್-2026ಕ್ಕೆ ಕೊನೆಗೊಳ್ಳಲಿದೆ. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ.

ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.
ಆಸಕ್ತರು ಅರ್ಜಿಯನ್ನು 2025ರ ಡಿಸೆಂಬರ್ 26 ರೊಳಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಪಡೆಯಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು