Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಸರಗಳ್ಳರ ಬಂಧನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬನ್ನೇರುಘಟ್ಟ ರಸ್ತೆಯ ಅರೆಕೆರೆಯ ನಿವಾಸಿ ಜಬಿವುದ್ದೀನ್ ಹಾಗೂ ಜಯನಗರದ ಮೊಹಮ್ಮದ್ ಮೆಹತಾಬ್ ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಆರೋಪಿಗಳಿಬ್ಬರೂ 11 ಬಾರಿ ಘೋಷಿತ ಅಪರಾಧಿಗಳಾಗಿದ್ದು, ಇವರ ವಿರುದ್ಧ 39 ಬಾರಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು. 2023ರಿಂದ ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಇದೀಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಜಯನಗರದಲ್ಲಿ ಕಾಲೇಜು ವ್ಯಾಸಂಗ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದ ಇಬ್ಬರು ಮೋಜಿನ ಜೀವನಕ್ಕಾಗಿ 2014ರಲ್ಲಿ ಸರಗಳ್ಳತನ ಆರಂಭಿಸಿದ್ದರು. ಜಯನಗರ, ಜೆ.ಪಿ.ನಗರ ವಿಜಯನಗರ, ಬನಶಂಕರಿ, ಬಾಣಸವಾಡಿ ಸೇರಿದಂತೆ 33 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇವರ ವಿರುದ್ಧ ಸರಗಳ್ಳತನ ಪ್ರಕರಣ ದಾಖಲಾಗಿದೆ. 2023ರಲ್ಲಿ ರಾಜಗೋಪಾಲನಗರ ಹಾಗೂ ಮಲ್ಲೇಶ್ವರದಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಜಬಿವುದ್ದೀನ್ ವಿರುದ್ಧ 73 ಹಾಗೂ ಮೊಹಮ್ಮದ್ ವಿರುದ್ಧ 31 ಪ್ರಕರಣಗಳು ದಾಖಲಾಗಿವೆ. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.
ಹಲವು ಬಾರಿ ಘೋಷಿತ ಅಪರಾಧಿ ಹಾಗೂ ಜಾಮೀನುರಹಿತ ವಾರೆಂಟ್ ಹೊರಡಿಸಿದರೂ ಕೋರ್ಟ್‌ಗೆ ಇಬ್ಬರು ಆರೋಪಿಗಳು ಗೈರಾಗಿದ್ದರು. ಆರೋಪಿಗಳ ಪತ್ತೆಗಾಗಿ ಇನ್‌ಸ್ಪೆಕ್ಟರ್ ದೀಪಕ್ ನೇತೃತ್ವದ ತಂಡ ಸತತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಯನಗರ ಪೊಲೀಸರ ಕಾರ್ಯಾಚರಣೆಗಾಗಿ
25 ಸಾವಿರ ರೂ.ನಗದು ಬಹುಮಾನವನ್ನು ನಗರ ಪೊಲೀಸ್ ಆಯುಕ್ತ ದಯಾನಂದ ಘೋಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು